HomeKarnatakaBIG NEWS: ಮಿನಿ ಬಸ್ ಪಲ್ಟಿ: ಮಗು ಸೇರಿ ಮೂವರ ಸ್ಥಿತಿ ಗಂಭೀರ

BIG NEWS: ಮಿನಿ ಬಸ್ ಪಲ್ಟಿ: ಮಗು ಸೇರಿ ಮೂವರ ಸ್ಥಿತಿ ಗಂಭೀರ

ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿ ಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಷ್ಟ್ರ ಮನೆ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಯಲಹಂಕದಲ್ಲಿ ನಡೆಯುತ್ತಿದ್ದ ನಾಮಕರಣ ಕಾರ್ಯಕ್ರಮಕ್ಕೆ ಶಿರಾದಿಂದ ಮಿನಿ ಬಸ್ ನಲ್ಲಿ ಸಂಬಂಧಿಕರು ಹೊರಟಿದ್ದರು. ಈ ವೇಳೆ ಬಸ್ ಅಪಘಾತಕ್ಕೀಡಾಗಿದೆ. ಬಸ್ ನಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ದೊಡ್ಡಬಳ್ಳಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular