ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಪಾಸಾಗಲು ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಕಡ್ಡಾಯಗೊಳಿಸಲಾಗಿದೆ.
ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಇರುವ ವಿಷಯಗಳಿಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 21 ಅಂಕ, ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಿಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.
ವಿಷಯವಾರು ಶೇಕಡ 33 ಅಂಕ ಪಡೆಯಲು ಎಸ್ಎಸ್ಎಲ್ಸಿಯಂತೆ ಪ್ರಾಯೋಗಿಕ ಅಥವಾ ಆಂತರಿಕ ಮೌಲ್ಯಮಾಪನದಲ್ಲಿ ಪೂರ್ಣ ಅಂಕ ಪಡೆದರೆ ಅದೆಲ್ಲವೂ ಪಾಸ್ ಅಂಕಕ್ಕೆ ಪರಿಗಣನೆಯಾಗುವುದಿಲ್ಲ. ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಲಾಗಿದೆ.





