ಚಿತ್ರದುರ್ಗ: ಭೀಮಸಮುದ್ರ ಬಳಿ ಗಣಿಯಲ್ಲಿ ಲಾರಿ ಡಿಕ್ಕಿಯಾಗಿ ಸೂಪರ್ ವೈಸರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
49 ವರ್ಷದ ಚಂದ್ರಶೇಖರ್ ಮೃತ ದುರ್ದೈವಿ. ಲಾರಿ ಅಪಘಾತದಲ್ಲಿ ಚಂದ್ರಶೇಖರ್ ಗಣಿಯಲ್ಲಿಯೇ ಸಾವನ್ನಪ್ಪಿದ್ದಾರೆ. ಆದರೆ ವಿಷಯವನ್ನು ಕುಟುಂಬದಿಂದ ಮುಚ್ಚಿಡಲು ಗಣಿ ಕಂಪನಿಯವರು ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ.
ಗಣಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳುಗೆ ಯಾವುದೇ ಸುರಕ್ಷತೆ ಇಲ್ಲ. ಅಮಾಯಕ ಜೀವಗಳು ಬಲಿಯಾಗುತ್ತಿವೆ ಎಂದು ಮೃತರ ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ. ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುಟುಂಬ ಆಗ್ರಹಿಸಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

