HomeKarnatakaಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಚಿತ್ರದುರ್ಗ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ಸಮಸ್ಯೆಯ ಕಾರಣ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಾರನಕಟ್ಟೆ ಗ್ರಾಮದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.

ಸಚಿವರು ಬೆಂಗಳೂರಿನಿಂದ ಗದಗಕ್ಕೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗ್ಗೆ 10:15ಕ್ಕೆ ಬೆಂಗಳೂರಿನ ಜಕ್ಕೂರು ಏರೋಡ್ರಂನಿಂದ ಟೇಕಾಫ್ ಆಗಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಪೈಲಟ್ ಕೂಡಲೇ ಸುರಕ್ಷಿತವಾಗಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಮಾಡಿದ್ದಾರೆ. ನಂತರ ಬೈರತಿ ಸುರೇಶ್ ರಸ್ತೆ ಮಾರ್ಗವಾಗಿ ಗದಗಕ್ಕೆ ಪ್ರಯಾಣ ಬೆಳೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular