ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಪ್ರಧಾನಿ ಮೋದಿ ವಿರುದ್ಧ ರಾಷ್ಟ್ರಪತಿಗೆ ಸಚಿವ ದಿನೇಶ್ ಗುಂಡೂರಾವ್ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ರಾಜಕೀಯ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರಪತಿಗಳಿಗೆ ದೂರು ನೀಡಿದ್ದಾರೆ.

ಸರ್ಕಾರದ ಅಧಿಕೃತ ಕಾರ್ಯಕ್ರಮವನ್ನು ವಿರೋಧ ಪಕ್ಷಗಳ ವಿರುದ್ಧ ಸುಳ್ಳು ಟೀಕೆ ಮಾಡಲು ಬಳಸಿಕೊಳ್ಳುವ ಮೂಲಕ ಪ್ರಧಾನಿ ಮೋದಿ ಅವರು ಆಡಳಿತ ಯಂತ್ರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ವಿವಿಧ ರಾಜ್ಯಗಳ ಆರೋಗ್ಯ ಸಚಿವರೊಂದಿಗಿನ ಸಂವಾದ ಕಾರ್ಯಕ್ರಮವನ್ನು ಪ್ರತಿಪಕ್ಷಗಳನ್ನು ಟೀಕಿಸಲು ಪ್ರಧಾನಿಯವರು ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಸಿಕಲ್ ಸೆಲ್ ಅನಿಮೀಯಾ ನಿವಾರಣೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ವರ್ಚುಯಲ್ ಮೂಲಕ ಭಾಗವಹಿಸಿದ್ದ ವೇಳೆ ವಿಡಿಯೋ ಸಂವಾದ ನಡೆಸಲಿದ್ದಾರೆ ಎಂದು ಕೇಂದ್ರ ವಿವಿಧ ರಾಜ್ಯಗಳ ಆರೋಗ್ಯ ಸಚಿವರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಕಾರ್ಯಕ್ರಮದ ಕುರಿತಾಗಿ ಯಾವುದೇ ಚರ್ಚೆ ಮಾಡದೆ ಚುನಾವಣೆ ಮೂಡ್ ನಲ್ಲಿರುವ ಮೋದಿ ವಿಪಕ್ಷಗಳನ್ನು ಹಣಿಯಲು ಸರ್ಕಾರಿ ಕಾರ್ಯಕ್ರಮ ಬಳಸಿಕೊಂಡಿದ್ದಾರೆ ಎಂದು ದೂರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read