HomeKarnatakaBIG NEWS: ಕಾನೂನು ಶಿಕ್ಷಣಕ್ಕೆ ಪ್ರತ್ಯೇಕ ನಿರ್ದೇಶನಾಲಯ: ಸಚಿವ ಹೆಚ್.ಕೆ. ಪಾಟೀಲ್

BIG NEWS: ಕಾನೂನು ಶಿಕ್ಷಣಕ್ಕೆ ಪ್ರತ್ಯೇಕ ನಿರ್ದೇಶನಾಲಯ: ಸಚಿವ ಹೆಚ್.ಕೆ. ಪಾಟೀಲ್

ಹುಬ್ಬಳ್ಳಿ: ಕಾನೂನು ಶಿಕ್ಷಣಕ್ಕೆ ಪ್ರತ್ಯೇಕ ನಿರ್ದೇಶನಾಲಯ ರಚಿಸುವ ಚಿಂತನೆ ಇದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಹುಬ್ಬಳ್ಳಿಯ ವಿದ್ಯಾನಗರದ ಕೆ.ಹೆಚ್. ಪಾಟೀಲ್ ಕಾಲೇಜು ಕ್ಯಾಂಪಸ್ ನಲ್ಲಿ ಶನಿವಾರ ವೇಮನ ವಿದ್ಯಾವರ್ಧಕ ಸಂಘದ ಕೆ.ಹೆಚ್. ಪಾಟೀಲ್ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಬೇರೆ ರಾಜ್ಯಗಳಿಗೆ ಹೋಲಿಸಿದಲ್ಲಿ ಕರ್ನಾಟಕದಲ್ಲಿ ಕಾನೂನು ಶಿಕ್ಷಣಕ್ಕೆ ಹೆಚ್ಚಿನ ಬೇಡಿಕೆ ಇದೆ. ಮುಂದಿನ ದಿನಗಳಲ್ಲಿ ಕಾನೂನು ಶಿಕ್ಷಣಕ್ಕೆ ಪ್ರತ್ಯೇಕ ನಿರ್ದೇಶನಾಲಯ ಮಾಡುವ ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾನೂನು ಶಿಕ್ಷಣವನ್ನು ಎತ್ತರಕ್ಕೆ ಒಯ್ಯಬೇಕು. ಯಾವುದೇ ವ್ಯಕ್ತಿಗೂ ಕಾನೂನು ಜ್ಞಾನ ಅವಶ್ಯಕ. ಇಂದು ಎಲ್ಲರಿಗೂ ಕಾನೂನು ಶಿಕ್ಷಣ ಅವಶ್ಯಕವಾಗಿದ್ದು, ಇದಕ್ಕಾಗಿ ವಿಶೇಷ ಮಹತ್ವ ನೀಡಲಾಗುತ್ತಿದೆ. ದಿನದಿಂದ ದಿನಕ್ಕೆ ಕಾನೂನು ಹೆಚ್ಚಿನ ಮಹತ್ವ ಪ್ರಾಧಾನ್ಯತೆ ಪಡೆಯುತ್ತಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular