ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಕುಸಿದು ಕುಳಿತ ಸಚಿವ ಹೆಚ್.ಸಿ ಮಹದೇವಪ್ಪ

ಬೆಂಗಳೂರು :   ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಬಿಸಿಲಿನ ತಾಪಕ್ಕೆ ಸಚಿವ ಹೆಚ್.ಸಿ  ಮಹದೇವಪ್ಪ ಕುಸಿದು ಕುಳಿತ ಘಟನೆ ಮೈಸೂರಿನ ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದಿದೆ.

ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಭಾಷಣ ಮಾಡುತ್ತಿದ್ದಾಗ ಬಿಸಿಲಿನ ತಾಪ ಹೆಚ್ಚಾಗಿದ್ದು, ಈ ವೇಳೆ ಸಚಿವರು ಒಮ್ಮೆಲೆ ಕುಸಿದು ಕೆಳಗೆ ಕೂತಿದ್ದಾರೆ. ನಂತರ ನೀರು ಕುಡಿದು ಸುಧಾರಿಸಿಕೊಂಡು  ಧಣಿವಾರಿಸಿಕೊಂಡರು. ಅವರ ಜೊತೆಗಿದ್ದ ಪೊಲೀಸರು ಅಧಿಕಾರಿಗಳು ಅವರನ್ನು ಕೂರಿಸಿ ಕುಡಿಯಲು ನೀರು ಕೊಟ್ಟರು.

ಬಾಗಲಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಶತಾಯುಷಿ ಅಜ್ಜಿ

ದೇಶದಾದ್ಯಂತ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ.
ಬಾಗಲಕೋಟೆಯಲ್ಲಿ ಶತಾಯುಷಿ ಅಜ್ಜಿ ಧ್ವಜಾರೋಹಣ ನೆರವೇರಿಸಿದ ಅಪರೂಪದ ಘಟನೆ ನಡೆದಿದೆ.

ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದ ಶತಾಯುಷಿ ಮಹಿಳೆಯೊಬ್ಬರು ಗುಣಮುಖರಾಗಿ ಆಸ್ಪತ್ರೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಅಪರೂಪದ ಘಟನೆ ನಗರದ ವಾಸನದ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ.ಇನ್ನೂ. ಉಡುಪಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಸಚಿವರಾಗಿ ಇದೇ ಮೊದಲ ಬಾರಿಗೆ ಧ್ವಜಾರೋಹರಣ ನೆರವೇರಿಸಿದರು. ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಅವರು ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read