ಬೆಂಗಳೂರು : ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ (KSFIC)ದ ಇ-ಕಾಮರ್ಸ್ ಅಂತರ್ಜಾಲ ತಾಣವನ್ನು ಸಚಿವ ಈಶ್ವರ್ ಖಂಡ್ರೆ ಉದ್ಘಾಟಿಸಿದರು.
1973ರಲ್ಲಿ ಕಂಪನಿಗಳ ಕಾಯಿದೆಯಡಿ ಸ್ಥಾಪನೆಯಾದ ಈ ನಿಗಮವು, ಗುಣಮಟ್ಟದ ಪೀಠೋಪಕರಣ, ಬಾಗಿಲು-ಬಾಗಿಲವಾಡ ಹಾಗೂ ಕಟಕಿ ಉತ್ಪನ್ನಗಳನ್ನು ಸಿದ್ಧಪಡಿಸಿ ಸರ್ಕಾರಿ ಕಟ್ಟಡಗಳು ಹಾಗೂ ಸಾರ್ವಜನಿಕರಿಗೆ ಪೂರೈಕೆ ಮಾಡುತ್ತ ಬಂದಿದೆ. ಈಗ ಡಿಜಿಟಲ್ ಯುಗದ ಅಗತ್ಯಕ್ಕೆ ತಕ್ಕಂತೆ https://www.ksficfurniture.com/ ಮೂಲಕ ನಿಗಮವು ಇನ್ನಷ್ಟು ಜನರಿಗೆ ತಲುಪಲಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಸರ್ಕಾರಿ ಶಾಲೆಗಳಿಗೆ ಮೇಜು, ಕುರ್ಚಿ, ಬೆಂಚು ಹಾಗೂ ಡೆಸ್ಕ್ ಪೂರೈಕೆ ಮಾಡುವ ಈ ನಿಗಮದ ಕಾರ್ಯ ಈಗ ಇನ್ನಷ್ಟು ಸುಲಭ ಮತ್ತು ಪಾರದರ್ಶಕವಾಗಲಿದೆ.ಈ ಸಂದರ್ಭದಲ್ಲಿ ನಿಗಮದ ಅಧ್ಯಕ್ಷರಾದ ಶಾಸಕ ಗೋಪಾಲಕೃಷ್ಣ ಬೇಲೂರು, ವ್ಯವಸ್ಥಾಪಕ ನಿರ್ದೇಶಕ ಡಾ. ಎಸ್. ವೆಂಕಟೇಶನ್ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಉಪಸ್ಥಿತರಿದ್ದರು.