HomeKarnatakaದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಮಾಹಿತಿ

ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಮಾಹಿತಿ

ಬಾಗಲಕೋಟೆ: ಕೇರಳ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ನಿರತರಾಗಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್ 4ರ ವರೆಗೆ ಕೇರಳದಲ್ಲಿ ಇರಲಿರುವ ಜಮೀರ್ ಅಹ್ಮದ್ ಏಪ್ರಿಲ್ 5ರಂದು ದಾವಣಗೆರೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಏ. 6, 7 ರಂದು ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಚಾರ ಮುನ್ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಾಗಲಕೋಟೆ ಕ್ಷೇತ್ರದ ಅಲ್ಪಸಂಖ್ಯಾತ ಮುಖಂಡರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಜಮೀರ್ ಅಹ್ಮದ್ ಅವರನ್ನು ಪ್ರಚಾರಕ್ಕೆ ಕರೆಸುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಪ್ರತಿಕ್ರಿಯೆ ನೀಡಿದ ಸಿಎಂ, ಜಮೀರ್ ಅಹ್ಮದ್ ಖಾನ್ ಪ್ರಚಾರಕ್ಕೆ ಬರುತ್ತಾರೆ. ಏಪ್ರಿಲ್ 5ರಂದು ಒಂದು ದಿನ ದಾವಣಗೆರೆಯಲ್ಲಿ, ಏಪ್ರಿಲ್ 6 ಮತ್ತು 7ರಂದು ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular