ಮೈಸೂರು : ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಗುಡ್ ಬೈ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನನಗೆ ವಯಸ್ಸಾಯ್ತು, ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳುತ್ತೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಆದರೆ ರಾಜಕಾರಣದಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದರು.
ಮುಂದಿನ ಚುನಾವಣೆಗೆ ನನಗೆ 78 ವರ್ಷ ಆಗುತ್ತದೆ, ಗೆದ್ದರೂ ಆರೋಗ್ಯ ದೃಷ್ಟಿಯಿಂದ ಸೇವೆ ಮಾಡುವುದಕ್ಕೆ ಆಗಲ್ಲ. ಆದರೆ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಸಚಿವರು ಹೇಳಿದ್ದಾರೆ.
You Might Also Like
TAGGED:ಸಚಿವ ಕೆ.ಎನ್ ರಾಜಣ್ಣ