HomeKarnatakaಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ಭರ್ತಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇಮಕಾತಿಗೆ ಸಚಿವ ಖರ್ಗೆ ಸೂಚನೆ

ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ಭರ್ತಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇಮಕಾತಿಗೆ ಸಚಿವ ಖರ್ಗೆ ಸೂಚನೆ

ಬೆಂಗಳೂರು: ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯೊಂದಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.

ರಾಜ್ಯದಲ್ಲಿ ಅಗ್ನಿಶಾಮಕ, ಶೋಧನೆ ಮತ್ತು ರಕ್ಷಣಾ ಕಾರ್ಯಗಳು, ನೈಸರ್ಗಿಕ ವಿಕೋಪಗಳಿಗೆ ತ್ವರಿತ ಸ್ಪಂದನೆ ಹಾಗೂ ವಿಪತ್ತು ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಲಪಡಿಸುವ ಕುರಿತು ಸಮಗ್ರವಾಗಿ ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ನೀಡಿದ್ದಾರೆ.

– ರಾಜ್ಯದ 219 ಅಗ್ನಿಶಾಮಕ ಠಾಣೆಗಳ ಕಾರ್ಯನಿರ್ವಹಣೆಯ ಸ್ಥಿತಿ ಪರಿಶೀಲನೆ ನಡೆಸಿ ಶೀಘ್ರದಲ್ಲಿಯೇ ವರದಿಗೆ ಸೂಚನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

– 490 ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಆರ್ಥಿಕ ಇಲಾಖೆಯ ಸಮನ್ವಯದೊಂದಿಗೆ ತ್ವರಿತಗೊಳಿಸಿ, 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ.

– ಹುಬ್ಬಳ್ಳಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಸ್ವಂತ ಕಟ್ಟಡವಿಲ್ಲದೆ ಇತರ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಠಾಣೆಗಳ ಮಾಹಿತಿ ಸಲ್ಲಿಸಿ, ಅಗತ್ಯವಿರುವ ಜಿಲ್ಲೆಗಳಲ್ಲಿ ಸ್ವಂತ ಅಗ್ನಿಶಾಮಕ ಠಾಣೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ.

– ಸಿಬ್ಬಂದಿಗೆ ಅಗತ್ಯವಿರುವ ನಿವಾಸ ಸೌಲಭ್ಯಗಳನ್ನು ಶೇ.50ರಷ್ಟು ಹೆಚ್ಚಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲು ಸೂಚನೆ.

– ವಿಪತ್ತು ಸಂದರ್ಭಗಳಲ್ಲಿ ತ್ವರಿತ ಮತ್ತು ಪರಿಣಾಮಕಾರಿ ಸ್ಪಂದನೆ ಅತ್ಯಗತ್ಯವಾಗಿದೆ. SDRF ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಬೇಕೆಂದು ತಿಳಿಸಲಾಗಿದೆ.

– ಗೃಹರಕ್ಷಕ ದಳವನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು  ಕಾರ್ಯಕ್ರಮಗಳ ರೂಪಿಸಿ, ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ವಿಸ್ತರಿಸುವಂತೆ ಸೂಚನೆ.

ರಾಜ್ಯದ ಪ್ರತಿಯೊಬ್ಬ ನಾಗರಿಕರ ಜೀವ ಮತ್ತು ಆಸ್ತಿಯ ರಕ್ಷಣೆ ಗ್ಯಾರಂಟಿ ಸರ್ಕಾರದ ಆದ್ಯತೆಯಾಗಿದೆ. ಅಗ್ನಿಶಾಮಕ, ವಿಪತ್ತು ನಿರ್ವಹಣೆ ಹಾಗೂ ಗೃಹರಕ್ಷಕ ದಳಗಳನ್ನು ಇನ್ನಷ್ಟು ಆಧುನಿಕ, ಸಬಲ ಮತ್ತು ಜನಸ್ನೇಹಿಯಾಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular