ವಚನಕಾರ ಅಂಬಿಗರ ಚೌಡಯ್ಯ ಪ್ರತಿಮೆಗೆ ಹಾನಿ: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಸಚಿವ ಖರ್ಗೆ ಸೂಚನೆ

 ಚಿತ್ತಾಪುರ ಮತಕ್ಷೇತ್ರದ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವುದನ್ನು ಸಚಿವ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ.

ಇಂತಹ ಹೇಯ ಕೃತ್ಯ ಖಂಡನೀಯ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರಿಗೆ ಕಾನೂನು ಅಡಿಯಲ್ಲಿ ಕಠಿಣ ಶಿಕ್ಷೆಯಾಗಲಿದೆ. ಘಟನೆ ಕುರಿತು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಆರೋಪಿಗಳನ್ನು ಶೀಘ್ರವೇ ಪತ್ತೆಹಚ್ಚಿ ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಂಬಿಗರ ಚೌಡಯ್ಯನವರು 12ನೇ ಶತಮಾನದಲ್ಲಿ ವಚನ ಕ್ರಾಂತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಿಕ ಪ್ರಜ್ಞೆಯನ್ನು ಜಾಗೃತಗೊಳಿಸಿದ ಬಸವಣ್ಣನವರ ಅನುಯಾಯಿ ಶರಣ. ಸಾವಿರಾರು ವರ್ಷಗಳಿಂದ ಜನ ಸಮೂಹದಲ್ಲಿದ್ದ ಮೂಢನಂಬಿಕೆಗಳ ವಿರುದ್ಧ ಅರಿವು ಮೂಡಿಸಿದ ಮಹಾ ಜ್ಞಾನಿ. ಸಮಾಜದಲ್ಲಿನ ಮೌಢ್ಯದ ಅಂಧಕಾರವನ್ನು ಅಳಿಸಿ, ಚಿಂತನೆಯ ಬೆಳಕು ಹೊತ್ತಿಸುವಲ್ಲಿ ಅಂಬಿಗರ ಚೌಡಯ್ಯ ಅವರ ಪಾತ್ರ ಹಿರಿದು. ಅವರ ವಚನಗಳು ನಮ್ಮಲ್ಲಿ ವಿಚಾರವಂತಿಕೆ ಮೂಡಿಸುತ್ತದೆ. ಆದರೆ ವಿಕೃತ ಮನಸ್ಥಿತಿಯ ಕೆಲವರು ಮಹಾನ್ ವಚನಕಾರರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ನಮ್ಮ ಭವ್ಯ ಪರಂಪರೆಗೆ ಮಾಡಿರುವ ಅಪಮಾನ. ಇದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಗುಡುಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read