HomeIndiaತಮ್ಮ ಬಳಿ ಸಮಂತಾ ಕಳಿಸುವಂತೆ ನಾಗಾರ್ಜುನಗೆ ಬೇಡಿಕೆ ಇಟ್ಟಿದ್ದ ಕೆ.ಟಿ. ರಾಮರಾವ್: ಸಚಿವೆ ಕೊಂಡಾ ಸುರೇಖಾ...

ತಮ್ಮ ಬಳಿ ಸಮಂತಾ ಕಳಿಸುವಂತೆ ನಾಗಾರ್ಜುನಗೆ ಬೇಡಿಕೆ ಇಟ್ಟಿದ್ದ ಕೆ.ಟಿ. ರಾಮರಾವ್: ಸಚಿವೆ ಕೊಂಡಾ ಸುರೇಖಾ ಹೊಸ ಬಾಂಬ್

ಹೈದರಾಬಾದ್: ತೆಲುಗು ನಟ ಅಕ್ಕಿನೇನಿ ನಾಗಚೈತನ್ಯ ಮತ್ತು ನಟಿ ಸಮಂತಾ ರುತ್ ಪ್ರಭು ಅವರು ವಿಚ್ಛೇದನ ಪಡೆದುಕೊಳ್ಳಲು ಬಿ.ಆರ್.ಎಸ್. ಪಕ್ಷದ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಕಾರಣ ಎಂದು ತೆಲಂಗಾಣದ ಅರಣ್ಯ ಸಚಿವೆ ಕೊಂಡಾ ಸುರೇಖಾ ಹೊಸ ಬಾಂಬ್ ಸಿಡಿಸಿದ್ದಾರೆ. ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ನಾಗಾರ್ಜುನ ಮಾಲಿಕತ್ವದ ಎನ್ ಕನ್ವೆನ್ಷನ್ ಸೆಂಟರ್ ನೆಲಸಮಗೊಳಿಸುವುದು ಬೇಡವೆನ್ನುವುದಾದರೆ ತನ್ನ ಬಳಿ ಸಮಂತಾ ಅವರನ್ನು ಕಳಿಸುವಂತೆ ರಾಮರಾವ್ ಬೇಡಿಕೆ ಇಟ್ಟಿದ್ದರು. ರಾಮರಾವ್ ಬಳಿ ಹೋಗುವಂತೆ ಸಮಂತಾಗೆ ನಾಗಚೈತನ್ಯ ಅವರ ತಂದೆ ನಟ ನಾಗಾರ್ಜುನ ಬಲವಂತ ಮಾಡಿದ್ದರು. ಆದರೆ, ಆಕೆ ಅದನ್ನು ಒಪ್ಪಿಕೊಂಡಿರಲಿಲ್ಲ. ಈ ವಿಚಾರವೇ ನಾಗಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನಕ್ಕೆ ಕಾರಣವಾಯಿತು ಎಂದು ಕೊಂಡಾ ಸುರೇಖಾ ಆರೋಪಿಸಿದ್ದಾರೆ.

ಕೆ.ಟಿ. ರಾಮರಾವ್ ಡ್ರಗ್ಸ್ ವ್ಯಸನಿಯಾಗಿದ್ದಾರೆ. ಚಿತ್ರರಂಗದ ಖ್ಯಾತ ತಾರೆಯರಿಗೆ ರೇವ್ ಪಾರ್ಟಿ ಆಯೋಜಿಸುತ್ತಿದ್ದರು. ಅವರ ದೌರ್ಜನ್ಯ ಸಹಿಸದೆ ಅನೇಕ ನಟಿಯರು ಚಿತ್ರರಂಗವನ್ನೇ ತೊರೆದಿದ್ದಾರೆ. ಕೆಲವರು ಮದುವೆಯಾಗಿ ಚಿತ್ರರಂಗದಿಂದ ದೂರ ಉಳಿದಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವೆ ಸುರೇಖಾ ಅವರ ಹೇಳಿಕೆಗೆ ಅಕ್ಕಿನೇನಿ ನಾಗಾರ್ಜುನ ಆಕ್ಷೇಪ ವ್ಯಕ್ತಪಡಿಸಿದ್ದು, ಒಬ್ಬ ಸಚಿವೆಯಾಗಿ ಈ ರೀತಿ ಮಾತನಾಡುವುದು ಸರಿಯಲ್ಲ. ಕೂಡಲೇ ನಿಮ್ಮ ಹೇಳಿಕೆ ಹಿಂಪಡೆದು ಬೇಷರತ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಬೇರೆಯವರ ಖಾಸಗಿತನವನ್ನು ಗೌರವಿಸಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮಹಿಳೆಯಾಗಿ ನೀವು ಈ ರೀತಿ ಆರೋಪ ಮಾಡಬಾರದು ಎಂದು ನಾಗಾರ್ಜುನ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular