BIG NEWS : ಆಪ್ತ ‘ಅಶೋಕ್ ಮಣ್ಣಿಕೇರಿ’ ನಿಧನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಾಪ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಹಾಗೂ ಗ್ರೇಡ್ 2 ತಹಶೀಲ್ದಾರ್ ನಿಧನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ಪೋಸ್ಟ್ ಹಂಚಿಕೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಆಪ್ತ ಸಹಾಯಕರಾಗಿದ್ದ ಅಶೋಕ ಮಣ್ಣಿಕೇರಿಯವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ. ಅಪಾರ ಜ್ಞಾನ, ಅನುಭವವುಳ್ಳ ವ್ಯಕ್ತಿಯನ್ನು ಕಳೆದುಕೊಂಡಿರುವುದು ದೊಡ್ಡ ನಷ್ಟವೆನಿಸುತ್ತಿದೆ. ಈ ಸಮಯದಲ್ಲಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಿ, ಅವರ ಕುಟುಂಬಸ್ಥರಿಗೆ ಭಗವಂತ ನೋವು ಸಹಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ.

ಅಶೋಕ್ ಮಣ್ಣಿಕೇರಿ ಮೃತ ತಹಶೀಲ್ದಾರ್. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಗ್ರಾಮೀಣ ಶಾಸಕರಾಗಿದ್ದಾಗ ಅಶೋಕ್ ಮಣ್ಣಿಕೇರಿ ಶಾಸಕರ ಆಪ್ತರಾಗಿದ್ದರು ಎನ್ನಲಾಗಿದೆ.
ಬೆಳಗಾವಿಯಲ್ಲಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಅಶೋಕ್ ಮಣ್ಣಿಕೇರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪತ್ನಿ ಹಾಗೂ ಆಕೆಯ ಸಹೋದರ ಹೇಳುತ್ತಿದ್ದಾರೆ. ಆದರೆ ಹೃದಯಾಘಾತದಿಂದ ಸಾವನ್ನಪ್ಪಿಲ್ಲ, ಅಶೋಕ್ ಮಣ್ಣಿಕೇರಿ ಸಾವಿನ ಬಗ್ಗೆ ಅನುಮಾನವಿದೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಅಶೋಕ್ ಸಹೋದರಿ ಒತ್ತಾಯಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read