BREAKING : ಯಜಮಾನಿಯರಿಗೆ ‘ಗೃಹಲಕ್ಷ್ಮಿ’ ಹಣ ಜಮಾ ಯಾವಾಗ..? ಬಿಗ್ ಅಪ್ ಡೇಟ್ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಈಗ ಎಲ್ಲವೂ ಸರಿಯಾಗಿದೆ,ಬಾಕಿ ಇರುವ ಗೃಹಲಕ್ಷ್ಮಿ ಹಣ ಹಾಕುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಆದಷ್ಟು ಬೇಗ ಗೃಹಲಕ್ಷ್ಮಿ ಹಣ ಹಾಕುತ್ತೇವೆ. ನಾವು ಯಾವುದೇ ಫಿಲ್ಟರ್ ಮಾಡಿಲ್ಲ, ಸದ್ಯದಲ್ಲೇ ಹಣ ಬರಲಿದೆ. ಗ್ಯಾರಂಟಿ ಯೋಜನೆಗಳು ಮುಂದುವರೆಯಲಿದೆ , ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅವರು ಹೇಳಿದರು.

ಕಳೆದ ವಾರ ‘ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತದೆ ಎಂದು ನಾನು ಹೇಳಿದ್ದೆ, 2 ದಿನ ಕಳೆದಿದೆ. ಇನ್ನೂ 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬರಲಿದೆ. ಮಹಿಳೆಯರು ಚಿಂತಿಸುವ ಅಗತ್ಯವಿಲ್ಲ . ಬಿಜೆಪಿಯವರು ಗೃಹಲಕ್ಷ್ಮಿ ಹಣ ಬರೋಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಕಿವಿ ಕೊಡಬೇಡಿ ಎಂದು ಹೇಳಿದ್ದರು. ಒಟ್ಟಿನಲ್ಲಿ ಗೃಹಲಕ್ಷ್ಮಿ ಹಣಕ್ಕಾಗಿ ಮಹಿಳೆಯರು ಎದುರು ನೋಡುತ್ತಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read