ರಾಜ್ಯದಲ್ಲಿ ವಚನ ವಿವಿ, ಎಲ್ಲಾ ವಿವಿಗಳಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ: ಸಚಿವ ಎಂ.ಬಿ. ಪಾಟೀಲ್

ವಿಜಯಪುರ: ರಾಜ್ಯದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ ಮತ್ತು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಬಸವ ಅಧ್ಯಯನ ಪೀಠ ಸ್ಥಾಪನೆ ಸಂಬಂಧ ಸರ್ಕಾರದ ಮಟ್ಟದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಪುಣೆಯ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರ, ಅಕ್ಕನ ಅರಿವು, ವಚನ ಅಧ್ಯಯನ ವೇದಿಕೆಯಿಂದ ವಿಜಯಪುರದಲ್ಲಿ ನಡೆದ ಡಾ. ಸರಸ್ವತಿ ಪಾಟೀಲ ಅವರ ಅಭಿನಂದನ ಸಮಾರಂಭ, ಅನುಭವ ಸಿರಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಸವಣ್ಣನವರು ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ವಿಶ್ವದ ಸಾಂಸ್ಕೃತಿಕ ನಾಯಕರಾಗಿದ್ದು, ಅವರ ವಚನ ವಿಚಾರಧಾರೆಗಳನ್ನು ವಿಶ್ವದಾದ್ಯಂತ ಪ್ರಸಾರ ಮಾಡಲು ಮತ್ತು ಬೇರೆ ಭಾಷೆಗಳಿಗೆ ವಚನ ಸಾಹಿತ್ಯ ಅನುವಾದ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಬಿ.ಎಲ್.ಡಿ.ಇ. ಸಂಸ್ಥೆಯ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದಿಂದ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read