HomeBusinessಬೇಯರ್ 200 ಕೋಟಿ ಹೂಡಿಕೆಗೆ ಒಪ್ಪಂದ: ಆರೋಗ್ಯ ಸೇವೆ ಆರೋಗ್ಯ ಸೇವೆ

ಬೇಯರ್ 200 ಕೋಟಿ ಹೂಡಿಕೆಗೆ ಒಪ್ಪಂದ: ಆರೋಗ್ಯ ಸೇವೆ ಆರೋಗ್ಯ ಸೇವೆ

ಬೆಂಗಳೂರು: ಆರೋಗ್ಯ ಸೇವೆ ಮತ್ತು ಕೃಷಿ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದ ಜರ್ಮನಿ ಮೂಲದ ಬೇಯರ್ ಸೈನ್ಸ್ ಅಂಡ್ ಇನ್ನೋವೇಶನ್ ಬೆಂಗಳೂರಿನ ಸಮೀಪ ತನ್ನ ಅತ್ಯಾಧುನಿಕ ಉತ್ಪಾದನಾ ಸ್ಥಾವರ ಅಭಿವೃದ್ಧಿಗೆ 200 ಕೋಟಿ ರೂ. ಹೂಡಿಕೆ ಮಾಡಲಿದ್ದು, ಈ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಮತ್ತು ಬೇಯರ್ ಕಂಪನಿಯ ಸಿಎಫ್‌ಒ ವಿನೀತ್ ಜಿಂದಾಲ್ ಒಡಂಬಡಿಕೆಗೆ ಸಹಿ ಹಾಕಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬೇಯರ್ ಕಂಪನಿಯು ಮುಂದಿನ 7 ವರ್ಷಗಳಲ್ಲಿ ಹಂತಹಂತವಾಗಿ ಈ ಹೂಡಿಕೆ ಮಾಡಲಿದೆ. ತಾವು ಇತ್ತೀಚೆಗೆ ರಾಜ್ಯಕ್ಕೆ ಬಂಡವಾಳ ಆಕರ್ಷಿಸಲು ನೆದರ್ಲೆಂಡ್ಸ್ ಪ್ರವಾಸ ಕೈಗೊಂಡಿದ್ದಾಗ ಆಮ್ಸ್ಟರ್ ಡ್ಯಾಮ್‌ನಲ್ಲಿ ಕಂಪನಿಯ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಲಾಗಿತ್ತು ಎಂದಿದ್ದಾರೆ.

ರಸಗೊಬ್ಬರ, ಕೀಟನಾಶಕ ಮತ್ತು ಶಿಲೀಂಧ್ರನಾಶಕ ಮುಂತಾದವನ್ನು ಉತ್ಪಾದಿಸುವ ಈ ಕಂಪನಿಯು ಹೂಡಿಕೆಯಿಂದ 220 ಉದ್ಯೋಗಗಳು ಸೃಷ್ಟಿಯಾಗಲಿವೆ. ಕಂಪನಿಯು ಮುಂದಿನ ವರ್ಷದ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೂ ಮೊದಲೇ ಯೋಜನೆಯ ಭೂಮಿಪೂಜೆ ನೆರವೇರಿಸಲು ಬಯಸಿದ್ದು, ತ್ವರಿತವಾಗಿ ತಯಾರಿಕೆ ಚಟುವಟಿಕೆಗಳನ್ನು ಆರಂಭಿಸಲು ಉತ್ಸುಕವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕಂಪನಿಯು ಈಗಾಗಲೇ ಬೆಂಗಳೂರಿನಲ್ಲಿ ತನ್ನ ಸೇವಾ ಮತ್ತು ನಾವೀನ್ಯತೆಯ ಹಬ್ ಹಾಗೂ ಚಾಮರಾಜನಗರದಲ್ಲಿ ಬೆಳೆ ಪರೀಕ್ಷಾ ಕೇಂದ್ರವನ್ನು ಹೊಂದಿದೆ. ಭಾರತದಲ್ಲಿ ಇದು 125 ವರ್ಷಗಳಿಂದಲೂ ಇದ್ದು, 11 ಸಾವಿರ ಜನರಿಗೆ ಕೆಲಸ ಕೊಟ್ಟಿದೆ. ದೇಶದಲ್ಲಿ ಬೇಯರ್ ಕಂಪನಿಯು 7 ಉತ್ಪಾದನಾ ಸ್ಥಾವರಗಳು ಮತ್ತು 3 ಜಿಇಸಿ ಕೇಂದ್ರಗಳನ್ನು ಹೊಂದಿದೆ. ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಆಯುಕ್ತೆ ಖುಷ್ಬೂ ಗೋಯಲ್ ಚೌಧರಿ, ಕೆಐಎಡಿಬಿ ಗೋವಿಂದ ರೆಡ್ಡಿ ಉಪಸ್ಥಿತರಿದ್ದರು ಎಂದು ಅವರು ನುಡಿದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular