ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಆರಂಭವಾಗಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ (ಜಾತಿ ಗಣತಿ) ಗಣತಿದಾರರಿಗೆ ಬೇಕಾದ ಮಾಹಿತಿ ಕಿಟ್ ಗಳನ್ನು ವಿತರಿಸುವ ಮೂಲಕ ಚಾಲನೆ ನೀಡಲಾಯಿತು ಎಂದು ಸಚಿವ ಮಧು ಬಂಗಾರಪ್ಪ ಪೋಸ್ಟ್ ಹಂಚಿಕೊಂಡಿದ್ದಾರೆ.
ಮನೆ ಮನೆಗೆ ತೆರಳುವ ಗಣತಿದಾರರು ಹಿಂದುಳಿದ ವರ್ಗ ಈಗಾಗಲೇ ಸಿದ್ಧಪಡಿಸಿರುವ ೬೦ ಪ್ರಶ್ನೆಗಳನ್ನು ಕೇಳಿ, ಆ ಮಾಹಿತಿಗಳನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಪ್ರತಿ ಕುಟುಂಬದ ಸಮಗ್ರ ಸಮೀಕ್ಷೆ ಕಾರ್ಯವನ್ನು ನಡೆಸಲಾಗುತ್ತಿದ್ದು, 7 ಕೋಟಿ ಕನ್ನಡಿಗರಿಂದ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ. ಜಾತಿ ಗಣತಿಗೆ ನಿಯೋಜಿತರಾಗಿರುವ ಶಿಕ್ಷಕರಿಗೆ ಗಣತಿ ಕಾರ್ಯವನ್ನು ಯಾವ ರೀತಿ ನಡೆಸಬೇಕು, ಯಾವೆಲ್ಲಾ ಮಾಹಿತಿಗ
ಳನ್ನು ಸಂಗ್ರಹಿಸಬೇಕು ಎಂಬ ಬಗ್ಗೆ ಈಗಾಗಲೇ ತರಬೇತಿಯನ್ನು ನೀಡಲಾಗಿದೆ ಎಂದು ತಿಳಿಸಿದೆನು.
ಈ ವೇಳೆ ಜಿಲ್ಲಾಧಿಕಾರಿ ಶ್ರೀ ಗುರುದತ್ತ ಹೆಗಡೆ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಸಚಿವ ಮಧು ಬಂಗಾರಪ್ಪ ಪೋಸ್ಟ್ ಹಂಚಿಕೊಂಡಿದ್ದಾರೆ.