HomeKarnatakaಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಸರ್ಕಾರ ಬದ್ಧ: ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ನೂತನ ವೆಬ್ಸೈಟ್ ಲೋಕಾರ್ಪಣೆ...

ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಸರ್ಕಾರ ಬದ್ಧ: ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ನೂತನ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಯೋಜನೆ, ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವ ನಿಗಮದ ವೆಬ್‌ಸೈಟ್‌ ಅನ್ನು ಇಂದು ಲೋಕಾರ್ಪಣೆಗೊಳಿಸಲಾಗಿದೆ. ಇದರಿಂದ ನಿಗಮದ ಚುಟವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ವೇದಿಕೆ ದೊರೆತಂತಾಗಿದೆ.

ಬೆಂಗಳೂರಿನ ವಸಂತನಗರದಲ್ಲಿರುವ ದೇವರಾಜ ಅರಸು ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ನೂತನ ವೆಬ್‌ಸೈಟ್‌ ಅನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಉದ್ಘಾಟಿಸಿದರು.

ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮಾಹಿತಿಯನ್ನು ಸಮುದಾಯದ ಜನರಿಗೆ ಸುಲಭವಾಗಿ ತಲುಪಿಸುವ ಉದ್ದೇಶದಿಂದ ನೂತನ ವೆಬ್‌ಸೈಟ್‌ ಆರಂಭಿಸಲಾಗಿದೆ. ಇನ್ನು ಮುಂದೆ ಸರ್ಕಾರದ ಪ್ರತಿಯೊಂದು ಕಾರ್ಯಕ್ರಮ ಹಾಗೂ ಸೌಲಭ್ಯಗಳ ಮಾಹಿತಿ ಈ ವೆಬ್‌ಸೈಟ್‌ ನಲ್ಲಿ ಲಭ್ಯವಾಗಲಿದೆ. ಸಮುದಾಯದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ನಿಗಮಕ್ಕೆ ಅಗತ್ಯ ಅನುದಾನ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುವೆ. ಶ್ರೀ ನಾರಾಯಣ ಗುರುಗಳ ಆಶಯದಂತೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ನಾರಾಯಣ ಗುರುಗಳ ಚಿಂತನೆ ಹಾಗೂ ಆದರ್ಶಗಳನ್ನು ಸಾಕಾರಗೊಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ಮಾತನಾಡಿ, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ನೂತನ ವೆಬ್‌ಸೈಟ್‌ ಮೂಲಕ ಸರ್ಕಾರದ ಯೋಜನೆಗಳು, ಶೈಕ್ಷಣಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಮಾಹಿತಿ ಲಭ್ಯವಾಗಲಿದೆ. ಸಮುದಾಯದ ಜನರು ವೆಬ್‌ಸೈಟ್‌ ಬಳಸಿಕೊಂಡು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.

ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮಾತನಾಡಿ, ಸಚಿವ ಮಧು ಬಂಗಾರಪ್ಪ ಹಾಗೂ ಸಚಿವ ಯು.ಟಿ. ಖಾದರ್ ಅವರು ನೂತನ ವೆಬ್‌ಸೈಟ್‌ ಗೆ ಚಾಲನೆ ನೀಡಿದ್ದಾರೆ. 26 ಪಂಗಡಗಳನ್ನು ಒಳಗೊಂಡಿರುವ ನಾರಾಯಣ ಗುರು ಅಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಳ್ಳುವ ವಿವಿಧ ಕಾರ್ಯಕ್ರಮಗಳು ಹಾಗೂ ಸರ್ಕಾರದ ಯೋಜನೆಗಳ ಸಂಪೂರ್ಣ ಮಾಹಿತಿ ವೆಬ್‌ಸೈಟ್‌ ನಲ್ಲಿ ಲಭ್ಯವಾಗಲಿದೆ ಎಂದು ತಿಳಿಸಿದರು. ನಿಗದ ಕಾರ್ಯಗಳಿಗೆ ಮಧು ಬಂಗಾರಪ್ಪ ಅವರು ಬೆಂಬಲವಾಗಿ ನಿಂತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರವಿಹಾಳ, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ, ಹಿಂದುಳಿದ ವರ್ಗಗಳ ಯುವ ಮುಖಂಡ ರವಿ ಬೋಸರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬಂಜಾರ ಸಮುದಾಯದ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮವು ಬಂಜಾರ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಸ್ವಯಂ ಉದ್ಯೋಗ ನೇರಸಾಲ-ರೂ.1 ಲಕ್ಷ, ಕುರಿ ಸಾಕಾಣಿಕೆ ಯೋಜನೆ- ರೂ.1 ಲಕ್ಷ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ- ರೂ.2 ಲಕ್ಷ, ಸ್ವಾವಲಂಭಿ ಸಾರಥಿ- ರೂ.4 ಲಕ್ಷ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್- ರೂ.4 ಲಕ್ಷ, ಹೈನುಗಾರಿಕೆ- ರೂ.1.25 ಲಕ್ಷ, ಗಂಗಾ ಕಲ್ಯಾಣ ಯೋಜನೆ- ರೂ.3.75 ಲಕ್ಷ, ಭೂ ಒಡೆತನ ಯೋಜನೆ- ರೂ.20 ಲಕ್ಷ, ಮೈಕ್ರೋಕ್ರೆಡಿಟ್ ಯೋಜನೆ- ರೂ.5 ಲಕ್ಷ ಸೌಲಭ್ಯ ನೀಡಲಾಗುವುದು. 

ಆಸಕ್ತ ಬಂಜಾರ ಸಮುದಾಯದವರು ಸ್ಥಳೀಯ ಗ್ರಾಮ ಒನ್, ಶಿವಮೊಗ್ಗ ಒನ್ ಹಾಗೂ ಕರ್ನಾಟಕ ಒನ್ ಪೋರ್ಟಲ್‌ಗಳಲ್ಲಿ  ನ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular