HomeKarnatakaಮಂಗನ ಕಾಯಿಲೆಯಿಂದ ಮೃತಪಟ್ಟ ಮಂಜಪ್ಪ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

ಮಂಗನ ಕಾಯಿಲೆಯಿಂದ ಮೃತಪಟ್ಟ ಮಂಜಪ್ಪ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

ಶಿವಮೊಗ್ಗ: ​ಸಾಗರ ತಾಲೂಕಿನ ತಾಳಗುಪ್ಪ ಹೋಬಳಿ ಮಂಜಿನಕಾನು ಗ್ರಾಮದ ನಿವಾಸಿ ಮಂಜಪ್ಪ ನಡುಗಿನಮನೆ ಅವರು ಮಂಗನ ಕಾಯಿಲೆಯಿಂದ(KFD) ಮೃತಪಟ್ಟ ಸುದ್ದಿ ತಿಳಿದ ಸಚಿವ ಮಧು ಬಂಗಾರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ್ದಾರೆ.

​ಮೃತ ಮಂಜಪ್ಪನವರ ಪತ್ನಿ ಪಾರ್ವತಿ ಅವರು ಕೂಡ ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಅತ್ಯುತ್ತಮ ದರ್ಜೆಯ ವೈದ್ಯಕೀಯ ಸೇವೆ ಒದಗಿಸುವಂತೆ ದೂರವಾಣಿ ಮೂಲಕ ವೈದ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

​ಕೈಗೊಂಡ ಪ್ರಮುಖ ಕ್ರಮಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

​ಪೀಡಿತ ಗ್ರಾಮಗಳಲ್ಲಿ ಲಸಿಕೆ ನೀಡುವ ಪ್ರಕ್ರಿಯೆಯನ್ನು ಯುದ್ಧೋಪಾದಿಯಲ್ಲಿ ಚುರುಕುಗೊಳಿಸಲು ಸೂಚಿಸಲಾಗಿದೆ.

​ಕಾಡಿಗೆ ಹೋಗುವ ರೈತರು ಮತ್ತು ಕಾರ್ಮಿಕರಿಗೆ ರಕ್ಷಣೆ ನೀಡುವ ‘ಡಿಎಂಪಿ’ ತೈಲವನ್ನು ತಕ್ಷಣವೇ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.

 ಗ್ರಾ.ಪಂ ಮಟ್ಟದಲ್ಲಿ ಕಾಯಿಲೆಯ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

​ಸಾರ್ವಜನಿಕರ ಆರೋಗ್ಯ ರಕ್ಷಣೆ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಔಷಧೋಪಚಾರ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.

​ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular