ಕೈಗಾರಿಕೆ ಸ್ಥಾಪನೆ ಸರಳೀಕರಣ, ಏಕಗವಾಕ್ಷಿ ವ್ಯವಸ್ಥೆ ಜಾರಿ: ಎಂ.ಬಿ. ಪಾಟೀಲ್

ವಿಜಯಪುರ: ಕೈಗಾರಿಕೆಗಳ ಸ್ಥಾಪನೆಗೆ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ಮಾಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಗಾರಿಕೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ತೆಲಂಗಾಣದ ಏಕಗವಾಕ್ಷಿ ಮಾದರಿ ಸೇರಿ ಇತರೆ ರಾಜ್ಯಗಳಲ್ಲಿ ಇರುವ ಸರಳೀಕೃತ ಮಾದರಿಗಳ ಕುರಿತು ಮಾಹಿತಿ ಪಡೆದು ಚರ್ಚೆ ನಡೆಸಲಾಗಿದೆ ಎಂದರು.

ಆಯಾ ಜಿಲ್ಲೆಗಳ ಅಗತ್ಯಕ್ಕೆ ತಕ್ಕಂತೆ ಕೈಗಾರಿಕೆಗಳನ್ನು ಸ್ಥಾಪಿಸಿ ನಿರುದ್ಯೋಗ ನಿವಾರಿಸಲು ನಮ್ಮ ಸರ್ಕಾರ ಆದ್ಯತೆ ನೀಡಲಿದೆ. ಕೈಗಾರಿಕೆಗಳಿಗೆ ಅನುಮತಿ ನೀಡಲು ಏಕಗವಾಕ್ಷಿ ಪ್ರಕ್ರಿಯೆ ಇದ್ದು, ಇದು ಬಹುಗವಾಕ್ಷಿ ಮಾದರಿಯಲ್ಲಿಯೇ ಇದೆ. ಹೆಸರಿಗೆ ತಕ್ಕಂತೆ ಏಕಗವಾಕ್ಷಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಿವಿಧ ರಾಜ್ಯಗಳಲ್ಲಿ ಕೈಗಾರಿಕೆಗಳ ಪ್ರಗತಿಗೆ ಕೈಗೊಂಡ ಕಾರ್ಯಕ್ರಮಗಳ ಸಮಗ್ರ ಅಧ್ಯಯನ ಮಾಡಿ ಕರ್ನಾಟಕದ ಕೈಗಾರಿಕಾ ವಲಯವನ್ನು ಮಾದರಿಯಾಗಿ ಪ್ರಗತಿಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಕೈಗಾರಿಕಾ ಉದ್ದೇಶಕ್ಕೆ ಭೂಮಿ ಪಡೆದುಕೊಂಡು ನಂತರ ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಬಳಕೆ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇದಕ್ಕೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read