ಕಲಬುರಗಿಯಲ್ಲಿ ಮೊದಲ ‘ಟ್ರಾಮಾ ಕೇರ್ ಸೆಂಟರ್’ ಉದ್ಘಾಟಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ : ಇಂದು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ₹ 55 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ‘ಟ್ರಾಮಾ ಕೇರ್ ಸೆಂಟರ್’ ಉದ್ಘಾಟನೆ ನೆರವೇರಿಸಿದ್ದಾರೆ.

ಈ ವೇಳೆ ಮಾತನಾಡಿದ ಸಚಿವರು, ಟ್ರಾಮಾ ಕೇರ್ ಸೆಂಟರ್ ಗೆ ಅಡಿಗಲ್ಲು ಹಾಕಿದ್ದೇ ನಮ್ಮ ಕಾಂಗ್ರೆಸ್ ಸರ್ಕಾರ. ಈಗ ಉದ್ಘಾಟನೆ ಮಾಡಿದ್ದೂ ಕೂಡಾ ಕಾಂಗ್ರೆಸ್ ಸರ್ಕಾರ.‌ ಇದು ನಮ್ಮ ಸರ್ಕಾರದ ಬದ್ಧತೆಯಾಗಿದೆ ಎಂದರು.

ಟ್ರಾಮಾ ಕೇರ್ ಸೆಂಟರ್ ಈ ಭಾಗದ ಹೆಮ್ಮೆಯ ಆರೋಗ್ಯ ಕೇಂದ್ರವಾಗಿದ್ದು, ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಅಡಿಗಲ್ಲು ಹಾಕಲಾಗಿತ್ತು. ಆದರೆ ಹಿಂದಿನ ಬಿಜೆಪಿ ಸರ್ಕಾರ ಇದನ್ನು ನಿರ್ಲಕ್ಷಿಸಿತ್ತು. ಈಗ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಕಾಮಗಾರಿಯನ್ನು ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸುತ್ತಿದ್ದೇವೆ. ಯಾವುದೇ ಒಂದು ಯೋಜನೆ ಜನರಿಗೆ ತಲುಪಬೇಕೆಂದರೆ ಸರ್ಕಾರಕ್ಕೆ ಮಾತೃ ಹೃದಯವಿರಬೇಕು ಅಂತಹ ಹೃದಯ ನಮ್ಮ ಕಾಂಗ್ರೆಸ್ ಸರ್ಕಾರಕ್ಕಿದೆ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಹಲವಾರು ಹೆಸರಾಂತ ಆರೋಗ್ಯ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ. ಇಎಸ್ ಐ, ಕಿದ್ವಾಯಿ, ಜಯದೇವ, ಜಿಮ್ಸ್ ನಂತಹ ಸಂಸ್ಥೆಗಳು ಉತೃಷ್ಠ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತಿರುವುದು ನಮಗೆ ಹೆಮ್ಮೆಯ ವಿಷಯ ಎಂದರು.

ಆರ್ಟಿಕಲ್ 371 (J) ಅಡಿಯಲ್ಲಿ ಕಳೆದ ಸಾಲಿನಲ್ಲಿ ಈ ಭಾಗದ 1,000 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಲಭ್ಯವಾಗಿವೆ. ಕಲ್ಯಾಣ ಕರ್ನಾಟಕದಲ್ಲಿ ಆರೋಗ್ಯದ ಕ್ರಾಂತಿಯಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವರು ಸಾಕಷ್ಟು ಶ್ರಮಿಸುತ್ತಿದ್ದಾರೆ. ಇದರೊಂದಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ‘ಹೆಲ್ತ್ ಎಕ್ಸಲೆನ್ಸ್ ಸೆಂಟರ್’ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read