HomeLatest NewsBREAKING: ಲಿಫ್ಟ್ ನಲ್ಲಿ ಸಿಲುಕಿದ ಸಚಿವ ರಾಮಲಿಂಗಾರೆಡ್ಡಿ ಪರದಾಟ

BREAKING: ಲಿಫ್ಟ್ ನಲ್ಲಿ ಸಿಲುಕಿದ ಸಚಿವ ರಾಮಲಿಂಗಾರೆಡ್ಡಿ ಪರದಾಟ

ಬೆಂಗಳೂರು: ಲಿಫ್ಟ್ ನಲ್ಲಿ ಸಿಲುಕಿ ಸಚಿವ ರಾಮಲಿಂಗಾ ರೆಡ್ಡಿ ಪರದಾಟ ನಡೆಸಿದ್ದಾರೆ. 10 ನಿಮಿಷ ಲಿಫ್ಟ್ ನಲ್ಲಿ ಸಿಲುಕಿಕೊಂಡ ಅವರು ಪರದಾಡಿದ ಘಟನೆ ನಡೆದಿದೆ.

ಖಾಸಗಿ ಆಸ್ಪತ್ರೆಯ ಉದ್ಘಾಟನೆಗೆ ತೆರಳಿದ್ದಾಗ ಘಟನೆ ನಡೆದಿದೆ. ಕರ್ನಾಟಕದ ಗಡಿ ಭಾಗದ ತಮಿಳುನಾಡಿನ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದರು. ಈ ವೇಳೆ ಲಿಫ್ಟ್ ಡೋರ್ ಓಪನ್ ಆಗದೇ ಅದರಲ್ಲೇ ಸಚಿವರು ಸಿಲುಕಿಕೊಂಡಿದ್ದಾರೆ. ನಂತರ ಲಿಫ್ಟ್ ಆಪರೇಟರ್ ಸಹಾಯದಿಂದ ಡೋರ್ ಓಪನ್ ಮಾಡಲಾಗಿದೆ. ಸಚಿವರು ಸೇರಿ ಅವರೊಂದಿಗೆ ಇದ್ದವರು ಸುರಕ್ಷಿತರಾಗಿ ಹೊರಗೆ ಬಂದಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular