ಬೆಂಗಳೂರು: ಗೌರಿ -ಗಣಪತಿ ಹಬ್ಬ ಮತ್ತು ವಾರಾಂತ್ಯ ರಜೆ ಹಿನ್ನೆಲೆಯಲ್ಲಿ ಸಾಲು ಸಾಲಾಗಿ ಜನ ಊರಿಗೆ ಹೊರಟಿದ್ದಾರೆ. ಇದನ್ನೇ ಬಳಸಿಕೊಂಡ ಖಾಸಗಿ ಬಸ್ ಗಳು ಪ್ರಯಾಣಿಕರಿಂದ ಸುಲಿಗೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ಹಬ್ಬದ ನೆಪದಲ್ಲಿ ಖಾಸಗಿ ಬಸ್ ಗಳು ಬೇಕಾಬಿಟ್ಟಿಯಾಗಿ ಟಿಕೆಟ್ ದರ ಏರಿಕೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಕೆಎಸ್ಆರ್ಟಿಸಿಯಿಂದ ಹೆಚ್ಚುವರಿಗಾಗಿ 1500 ಬಸ್ ಸೇವೆ ಒದಗಿಸಲಾಗಿದೆ. ಅದೇ ರೀತಿ ಕಲ್ಯಾಣ ಕರ್ನಾಟಕ ಸಾರಿಗೆ ವಾಯುವ್ಯ ಸಾರಿಗೆ ಬಸ್ ಗಳು ಹೆಚ್ಚಿನ ಬಸ್ ಗಳನ್ನು ಓಡಿಸುತ್ತಿವೆ ಎಂದು ಹೇಳಿದ್ದಾರೆ.
ಖಾಸಗಿ ಬಸ್ ಗಳು 3-4 ಪಟ್ಟು ಟಿಕೆಟ್ ದರ ಏರಿಕೆ ಮಾಡುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಾವೇ ಗರಿಷ್ಠ ಸಂಖ್ಯೆಯಲ್ಲಿ ಬಸ್ ಗಳನ್ನು ಕಾರ್ಯಾಚರಣೆಗಿಳಿಸಿ ಜನರಿಗೆ ಅನುಕೂಲ ಮಾಡಿಕೊಡುತ್ತಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.
ಗಣೇಶ ಹಬ್ಬದ ಪ್ರಯುಕ್ತ ಕೆಎಸ್ಆರ್ಟಿಸಿ 1,500 ಹೆಚ್ಚುವರಿ ಬಸ್ಗಳನ್ನು ರಸ್ತೆಗಿಳಿಸಲಿದೆ. ಆಗಸ್ಟ್ 25 ಮತ್ತು 26ರಂದು ಬೆಂಗಳೂರಿನಿಂದ ವಿಶೇಷ ಬಸ್ ಸೇವೆ ಇರಲಿದೆ. #GaneshChaturthi#SpecialBusesForGaneshChaturthi pic.twitter.com/cKh3EYXvcz
— DIPR Karnataka (@KarnatakaVarthe) August 23, 2025