HomeKarnatakaBIG NEWS : ನಾಳೆ ಸಾರಿಗೆ ನೌಕರರ ಜೊತೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸಭೆ...

BIG NEWS : ನಾಳೆ ಸಾರಿಗೆ ನೌಕರರ ಜೊತೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸಭೆ ; ಸಿಗುತ್ತಾ ಗುಡ್ ನ್ಯೂಸ್..?

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು 2020 ಡಿಸೆಂಬರ್ ಹಾಗೂ 2021ರಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಮಾರ್ಚ್ 4ರಂದು ಬೆಂಗಳೂರು ಚಲೋ, ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಹೇಳಿದ್ದರು. ಆದರೆ ಕಾರಣಾಂತರಗಳಿಂದ ನಡೆದಿಲ್ಲ.

ಈ ಹಿನ್ನೆಲೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಾರಿಗೆ ನೌಕರರ ಸಭೆ ಕರೆದಿದ್ದು, ಗುರುವಾರ ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಡೆಯಲಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) , BMTC, KKRTC, NWKRTC ನೌಕರರ ಮುಖ್ಯಸ್ಥರಿಗೆ, ವಿವಿಧ ನೌಕರರ ವೇದಿಕೆ, ಸಂಘಟನೆಗಳ ಮುಖ್ಯಸ್ಥರನ್ನು ಸಭೆಗೆ ಆಹ್ವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮಾನ ವೇತನ, ಸರ್ಕಾರಿ ನೌಕರರೆಂದು ಪರಿಗಣನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿ ಅಂದಿನ ಸರ್ಕಾರ ಭರವಸೆಗಳನ್ನು ಕೊಟ್ಟು ಕೈತೊಳೆದುಕೊಂಡಿತ್ತು. ಆದರೆ ಈವರೆಗೂ ಸಾರಿಗೆ ಸಿಬ್ಬಂದಿಗಳ 6 ಬೇಡಿಕೆಗಳು ಈಡೇರಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular