HomeKarnatakaBREAKING : ಸಿಎಂ ಮುಂದೆ ರಾಜೀನಾಮೆ ಪ್ರಸ್ತಾಪ, ಕುತೂಹಲ ಮೂಡಿಸಿದ ಸಚಿವ S.S ಮಲ್ಲಿಕಾರ್ಜುನ ನಡೆ

BREAKING : ಸಿಎಂ ಮುಂದೆ ರಾಜೀನಾಮೆ ಪ್ರಸ್ತಾಪ, ಕುತೂಹಲ ಮೂಡಿಸಿದ ಸಚಿವ S.S ಮಲ್ಲಿಕಾರ್ಜುನ ನಡೆ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆಯ ಪ್ರಭಾವಿ ನಾಯಕ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ. ಸಚಿವ ಸ್ಥಾನದಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದು, ಕಾಂಗ್ರೆಸ್ ಪಡಶಾಲೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಹೌದು. ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆಯ ಪ್ರಭಾವಿ ನಾಯಕ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಡೆ ಭಾರಿ ಕುತೂಹಲ ಮೂಡಿಸಿದೆ. ಇತ್ತೀಚೆಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಸ್ಥಾನದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಮೂಲಗಳ ಪ್ರಕಾರ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಕಳೆದ ವಾರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಮ್ಮತಿಸಿಲ್ಲ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜೀನಾಮೆ ಪ್ರಸ್ತಾಪಕ್ಕೆ ಕಾರಣಗಳೇನು?

ವ್ಯವಹಾರಿಕ ಮತ್ತು ಕ್ಷೇತ್ರಾಭಿವೃದ್ಧಿ ಒತ್ತಡ: ಮಲ್ಲಿಕಾರ್ಜುನ ಅವರು ಕೇವಲ ಸಚಿವರಲ್ಲದೆ, ದೊಡ್ಡ ಉದ್ಯಮ ಸಮೂಹದ ಜವಾಬ್ದಾರಿಯನ್ನೂ ಹೊಂದಿದ್ದಾರೆ. ತಂದೆ ಶಾಮನೂರು ಶಿವಶಂಕರಪ್ಪ ಅವರ ವಯೋಸಹಜ ಆರೋಗ್ಯ ಏರುಪೇರು ಮತ್ತು ವ್ಯವಹಾರಗಳ ಮೇಲ್ವಿಚಾರಣೆಯ ಒತ್ತಡದಿಂದಾಗಿ ಸಚಿವ ಸ್ಥಾನ ನಿಭಾಯಿಸಲು ಕಷ್ಟವಾಗುತ್ತಿದೆ ಎಂಬುದು ಒಂದು ಕಾರಣ. ಜೊತೆಗೆ ಕ್ಷೇತ್ರದ ಕೆಲಸಗಳಿಗೆ ಹೆಚ್ಚಿನ ಸಮಯ ನೀಡುವ ಉದ್ದೇಶವನ್ನು ಅವರು ಹೊಂದಿದ್ದಾರೆ ಎನ್ನಲಾಗಿದೆ.

ರಾಜಕೀಯ ದಾಳ ?: ತಮ್ಮ ಪುತ್ರನಿಗೆ ರಾಜಕೀಯವಾಗಿ ಭವಿಷ್ಯ ರೂಪಿಸಲು ಮತ್ತು ಮುಂಬರುವ ದಿನಗಳಲ್ಲಿ ಟಿಕೆಟ್ ಪಡೆಯುವ ಉದ್ದೇಶದಿಂದ ಈ ರೀತಿಯ ‘ಪೊಲಿಟಿಕಲ್ ಗೇಮ್’ ಮಾಡಿದ್ದಾರೆಯೇ ಎಂಬ ಅನುಮಾನಗಳೂ ಇವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular