HomeKarnatakaಅರ್ಥಪೂರ್ಣವಾಗಿ ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬ ಆಚರಣೆ

ಅರ್ಥಪೂರ್ಣವಾಗಿ ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬ ಆಚರಣೆ

ಕಾರ್ಮಿಕ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಶುಕ್ರವಾರ ಸಂತೋಷ್ ಲಾಡ್ ಫೌಂಡೇಷನ್ ವತಿಯಿಂದ ಮಾದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಧಾರವಾಡದ ಶಿಕ್ಷಕೀಯರ ಸರ್ಕಾರಿ ತರಬೇತಿ ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಅಂಗವೀಕಲರ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಂತೋಷ್ ಲಾಡ್ ಫೌಂಡೇಶನ್ ಮತ್ತು ಜನಮುಖಿ ಸೇವಾ ಸಂಸ್ಥೆ ಸಂಯುಕ್ತವಾಗಿ ವಿಶೇಷ ಚೇತನರು ಹಾಗೂ ಅವರ ಕುಟುಂಬದವರೊಂದಿಗೆ ಸಂವಾದ ಮತ್ತು ಸಂತೋಷ್ ಲಾಡ್ ಫೌಂಡೇಶನ್ ನೀಡಿರುವ ವಿಕಲಚೇತನರ ಸಾಧನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್., “ಜಿಲ್ಲೆಯ ಎಲ್ಲ ವಿಶೇಷ ಚೇತನ ಹಾಗೂ ದಿವ್ಯಾಂಗ ಮಕ್ಕಳ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ಅವರಿಗೆ ಅಗತ್ಯವಿರುವ ಉಪಕರಣ ಹಾಗೂ ಸೌಲಭ್ಯಗಳನ್ನು ಸರ್ಕಾರದಿಂದ ನೀಡಲಾಗುತ್ತಿದೆ. ವಿಶೇಷ ಚೇತನರನ್ನು ಸಂರಕ್ಷಿಸುತ್ತಿರುವ ಕುಟುಂಬಗಳಿಗೂ ಸರ್ಕಾರದ ನಿಯಮಾನುಸಾರ ನೆರವು ನೀಡಲಾಗುವುದು” ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ವಿಕಲಚೇತನರನ್ನು ವಿಶೇಷ ಕಾಳಜಿ ಮತ್ತು ಹೆಮ್ಮೆಯಿಂದ ಸಂರಕ್ಷಿಸಬೇಕು. ಅವರ ಬಗ್ಗೆ ಬರೀ ಕರುಣೆ ತೊರದೆ, ನ್ಯಾಯಯುತವಾಗಿ ಅವರಿಗೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವಲ್ಲಿ ಇಲಾಖೆಗಳು, ಅಧಿಕಾರಿಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಕ್ರಮವಹಿಸಬೇಲು” ಎಂದರು.

ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಮಾದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಚಿವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅನೇಕ ವಿಕಲಚೇತನ ಮಕ್ಕಳಿಗೆ ವ್ಹಿಲ್ ಚೇರ್, ಆಟಿಕೆ ಸಾಮಾನು, ಹಣ್ಣು ಹಾಗೂ ಧಾನ್ಯದ ಕಿಟ್ ಮತ್ತು ವಿಕಲಚೇತನ ಮಗುವಿಗೆ ಆರ್ಥಿಕ ಸಹಾಯ ನೀಡಲಾಗಿದೆ.

ವಿಕಲಚೇತನ ಹಾಗೂ ದಿವ್ಯಾಂಗ ಮಕ್ಕಳ ಯೋಗಕ್ಷೇಮ ಹಾಗೂ ಅವರ ಆರೋಗ್ಯ ಮತ್ತು ಸಂರಕ್ಷಣೆಗೆ ಸರ್ಕಾರದೊಂದಿಗೆ ಸರ್ಕಾರೇತರ ಸಂಸ್ಥೆಗಳು ಕೈಜೊಡಿಸಬೇಕು. ಇದರಿಂದ ವಿಕಲಚೇತನರಲ್ಲಿಯೂ ಬದುಕಿನ ಆತ್ಮವಿಶ್ವಾಸ ಮೂಡುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, “ವಿಶೇಷ ಕಾಳಜಿ ಮತ್ತು ಆತ್ಮವಿಶ್ವಾಸದ ಅಗತ್ಯವಿರುವ ವಿಶೇಷ ಚೇತನ ಹಾಗೂ ದಿವ್ಯಾಂಗ ಮಕ್ಕಳಿಗೆ ಸರ್ಕಾರಕ್ಕಿಂತ ಸಮಾಜದ ಹಾಗೂ ಸಮುದಾಯದ ಬೆಂಬಲ ಅಗತ್ಯವಿದೆ. ವಿಶೇಷ ಚೇತನರಲ್ಲಿ ಸಾಮಾನ್ಯಗಿಂತ ವಿಶೇಷವಾದ ಬುದ್ಧಿವಂತಿಕೆ ಹಾಗೂ ಜ್ಞಾನ ಇರುತ್ತದೆ. ಇದನ್ನು ಗುರುತಿಸಿ, ಪ್ರೋತ್ಸಾಹಿಸುವ ಅಗತ್ಯವಿದೆ” ಎಂದು ತಿಳಿಸಿದರು.

“ಜಿಲ್ಲಾ ಉಸ್ತುವಾರಿ ಸಚಿವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಸರ್ಕಾರೇತರ ಸಂಸ್ಥೆಗಳು ಹಾಗೂ ಇಲಾಖೆಗಳಿಂದ ಸಮಾಜಮುಖಿ ಕಾರ್ಯ ನೆರವೇರುತ್ತಿದೆ. ಜಿಲ್ಲಾ ಪಂಚಾಯತ್‍ಯಿಂದ ಹಾಗೂ ಗ್ರಾಮ ಪಂಚಾಯತಿಗಳಿಂದ ವಿಕಲಚೇತನರ ಅಭಿವೃದ್ಧಿಗಾಗಿ ವಿಶೇಷ ಅನುದಾನಗಳನ್ನು ನೀಡಲಾಗುತ್ತಿದೆ” ಎಂದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular