HomeKarnatakaಬೇಸಿಗೆಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆ, ಸಮರ್ಪಕ ಪೂರೈಕೆಗೆ ಸಚಿವ ಸಂತೋಷ್ ಲಾಡ್ ಸೂಚನೆ

ಬೇಸಿಗೆಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆ, ಸಮರ್ಪಕ ಪೂರೈಕೆಗೆ ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ: ಸರ್ಕಾರದಿಂದ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಲ್ಯಾಪ್ಸ್ ಆಗದಂತೆ ಬಳಸಬೇಕು. ಮತ್ತು ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕು. ಸಾರ್ವಜನಿಕರಿಗೆ ಬೇಸಿಗೆ ದಿನಗಳಲ್ಲಿ ಯಾವುದೇ ರೀತಿ ಅನಾನುಕೂಲವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು.

ಅವರು ಇಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು.

ಬೇಸಿಗೆ ಕಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಎಲ್ಲ ಸಂಬಂಧಿತ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತಿ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿನ ನೀರಿನ ಘಟಕಗಳಲ್ಲಿ ನಿಯಮಿತವಾಗಿ ನೀರಿನ ಗುಣಮಟ್ಟ ಪರೀಕ್ಷೆ ನಡೆಸಬೇಕು. ಒಂದು ವೇಳೆ ಯಾವುದೇ ರೀತಿಯ ದೋಷಗಳು ಅಥವಾ ಆರೋಗ್ಯಕ್ಕೆ ಹಾನಿಕಾರಕ ಅಂಶಗಳು ಕಂಡುಬಂದಲ್ಲಿ ಸಂಬಂಧಿತ ಅಧಿಕಾರಿಗಳೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಅವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೃಷಿ ವಿಶ್ವವಿದ್ಯಾಲಯದವರು ಕಾಲಕ್ಕೆ ತಕ್ಕಂತೆ ಹೊಸ ಹೊಸ ಬೆಳೆ ತಳಿಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಅವುಗಳ ಕುರಿತು ರೈತರಿಗೆ ಸಮಗ್ರ ಮಾಹಿತಿ ನೀಡಬೇಕು ಮತ್ತು ಪ್ರಸ್ತುತ ಮಾವಿನ ಗಿಡಗಳು ಹೂವು ಹಿಡಿದಿವೆ. ಅವುಗಳಿಗೆ ಜಿಗಿ ಆಗಿ ಮಾವಿನ ಕಾಯಿ ಹೂವುಗಳು ಉದುರುತ್ತಿವೆ. ಅವುಗಳ ಬಗ್ಗೆ ವಿಶ್ವವಿದ್ಯಾಲಯ, ತೋಟಗಾರಿಕೆ ಇಲಾಖೆಯವರು ರೈತರಿಗೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ತಿಳಿಸಿ ಎಂದು ಹೇಳಿದರು.

ವಿಧಾನ ಪರಿಷತ್ತ ಸದಸ್ಯ ಎಫ್.ಹೆಚ್.ಜಕ್ಕಪ್ಪನವರ ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿರುವ ಯೋಜನೆಗಳನ್ನು ಪಾರದರ್ಶಕವಾಗಿ ಮತ್ತು ನಿಯಮಾನುಸಾರ ಅನುಷ್ಠಾನಗೊಳಿಸಬೇಕು. ಮೀಸಲಾತಿಗೆ ಅನುಗುಣವಾಗಿ ಅನುದಾನವನ್ನು ಬಳಕೆ ಮಾಡಬೇಕು. ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಎಲ್ಲ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ, ಎಂ. ಆರ್. ಪಾಟೀಲ, ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಕುರಿತು ಮಾತನಾಡಿದರು. 

ಸಭೆಯಲ್ಲಿ ಕೃಷಿ, ತೋಟಗಾರಿಕೆ, ಕಂದಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ, ರಾಷ್ಟ್ರೀಯ ಹೆದ್ದಾರಿ, ಪಂಚಾಯತ ರಾಜ್ ಇಂಜನೀಯರಿಂಗ್, ಲೋಕೊಪಯೋಗಿ, ಸಹಕಾರಿ, ಸಾರಿಗೆ, ಕೃಷಿ ಉತ್ಪನ್ನ ಮಾರುಕಟ್ಟೆ, ಕೃಷಿ ಮಾರಾಟ ಮಂಡಳಿ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಾಡಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಇದ್ದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜಿಲ್ಲಾ ಕೆಡಿಪಿ ಸಭೆಯ ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular