ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸ ಹೆಲಿಕಾಪ್ಟರ್ ಖರೀದಿಸಿದ್ದಾರೆ/ ಬೆಂಗಳೂರು ಜಕ್ಕೂರು ಏರೋ ಡ್ರಮ್ನಲ್ಲಿ ಶುಕ್ರವಾರ ನೂತನ ಹೆಲಿಕಾಪ್ಟರ್ ಅನ್ನು ಪರಿಶೀಲಿಸಿದ ಸಚಿವರು ಶೀಘ್ರವೇ ಇದು ನನ್ನೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಸ್ವಂತ ಹೆಲಿಕಾಪ್ಟರ್ ಹೊಂದಿರುವ ಮೊದಲ ರಾಜಕಾರಣಿ ಸತೀಶ್ ಜಾರಕಿಹೊಳಿ ಅವರಾಗಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧತೆಗಾಗಿ ಅವರು ಹೊಸ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಅತ್ಯಧುನಿಕ ಸುರಕ್ಷತೆ, ಡಬಲ್ ಇಂಜಿನ್ ಹೊಂದಿರುವ ಹೆಲಿಕಾಪ್ಟರ್ ಇದಾಗಿದ್ದು, ಐವರು ಪ್ರಯಾಣಿಕರು ಇಬ್ಬರು ಪೈಲಟ್ ಗಳು ಪ್ರಯಾಣಿಸಬಹುದಾಗಿದೆ.