ಲಿಫ್ಟ್ ನಲ್ಲಿ ಸಿಲುಕಿಕೊಂಡು ಸಚಿವ ಸತೀಶ್ ಜಾರಕಿಹೊಳಿ ಪುತ್ರನ ಪರದಾಟ

ಲಿಫ್ಟ್ ಮಧ್ಯದಲ್ಲಿ ನಿಂತುಕೊಂಡ ಕಾರಣ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಮತ್ತವರ ಬೆಂಬಲಿಗರು ಪರದಾಡಿರುವ ಘಟನೆ ಇಂದು ಬೆಳಗಾವಿಯಲ್ಲಿ ನಡೆದಿದೆ.

ರಾಹುಲ್ ನಾಗರಪಂಚಮಿ ಪ್ರಯುಕ್ತ ಬೆಳಗಾವಿ ಜಿಲ್ಲಾಸ್ಪತ್ರೆ ಹೆರಿಗೆ ವಾರ್ಡ್ನಲ್ಲಿ ಹಣ್ಣು ವಿತರಿಸಲು ಹೋದ ಸಂದರ್ಭದಲ್ಲಿ ಲಿಫ್ಟ್ ಅರ್ಧದಲ್ಲಿಯೇ ನಿಂತುಕೊಂಡಿದೆ. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಐದು ಜನ ಹೋಗಬಹುದಾದ ಲಿಫ್ಟ್ ನಲ್ಲಿ 12 ಮಂದಿ ಇದ್ದರೆಂದು ಹೇಳಲಾಗಿದ್ದು, ಬಳಿಕ ಲಿಫ್ಟ್ ನಲ್ಲಿದ್ದವರನ್ನು ಸುರಕ್ಷಿತವಾಗಿ ಹೊರ ಕರೆತರಲಾಗಿದೆ. ತಾಂತ್ರಿಕ ದೋಷದಿಂದಾಗಿ ಈ ಸಮಸ್ಯೆ ಉಂಟಾಗಿತ್ತು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read