HomeLatest NewsBIG NEWS: ರೈಲ್ವೆ ಕಾಮಗಾರಿಗೆ 503 ಎಕರೆ ಭೂಸ್ವಾಧೀನ, ಹಸ್ತಾಂತರಕ್ಕೆ ಸಚಿವ ಸೋಮಣ್ಣ ಸೂಚನೆ

BIG NEWS: ರೈಲ್ವೆ ಕಾಮಗಾರಿಗೆ 503 ಎಕರೆ ಭೂಸ್ವಾಧೀನ, ಹಸ್ತಾಂತರಕ್ಕೆ ಸಚಿವ ಸೋಮಣ್ಣ ಸೂಚನೆ

ಹಾಸನ: ಬೇಲೂರುನಿಂದ ಹಾಸನ ರೈಲ್ವೆ ಮಾರ್ಗಕ್ಕೆ ೫೦೩ ಎಕರೆ ಭೂಸ್ವಾಧೀನ ಪಡಸಿಕೊಂಡು ಒಂದು ತಿಂಗಳೊಳಗೆ ರೈಲ್ವೆ ಇಲಾಖೆಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಕೇಂದ್ರ ರಾಜ್ಯ ರೈಲ್ವೆ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ಅವರು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೈಲ್ವೆ, ಕೆ.ಪಿ.ಟಿ.ಎಲ್, ರೈಟ್ಸ್ ಸಂಸ್ಥೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ರೈಲ್ವೆ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಿ ಕಾಮಗಾರಿಗೆ ಸಂಬಂಧಿಸಿದಂತೆ ಟೆಂಡರ್ ಕರೆದು ೨ ವರ್ಷದಲ್ಲಿ ಈ ಯೋಜನೆಯನ್ನು ಪೂರ್ಣಗೋಳಿಸಲು ಕ್ರಮವಹಿಸುವಂತೆ ಸೂಚಿಸಿದರು.

ಕೆ.ಪಿ.ಟಿ.ಎಲ್ ಅಧಿಕಾರಿಗಳು ವಿದ್ಯುತ್ ಲೈನ್ ಹಾಗೂ ಸಬ್ ಸ್ಟೇಷನ್‌ಗಳಿಗೆ ಸಂಬAದಿಸಿದ ಕೆಲಸಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಸೂಚಿಸಿದರು. ಸಕಲೇಶಪುರ ಭಾಗದಲ್ಲಿ ರೈಲ್ವೆ ಮಾರ್ಗದ ಮೇಲೆ ಭೂ ಕುಸಿತವಾಗುತ್ತಿದ್ದು ಈ ಸಮಸ್ಯೆ ನಾಲ್ಕು ತಿಂಗಳಲ್ಲಿ ಬಗೆಹರಿಸಲು ಕ್ರಮವಹಿಸುವಂತೆ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈಲ್ವೆಯೂ ಸಾಮಾನ್ಯ ಜನರ ಜೀವನಾಡಿ ಅಧಿಕಾರಿಗಳು ನಿರ್ಲಕ್ಷ್ಯ ಮಾಡದೇ ಹೆಚ್ಚಿನ ಮುತುವರ್ಜಿವಹಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಜನರಿಗೆ ಅನುಕೂಲವಾಗುವಂತೆ ಲೋರ್ಕಾಪಣೆ ಮಾಡಲು ಸಹಕಾರ ನೀಡಬೇಕು ಎಂದು ತಿಳಿಸಿದರು,

 ಸಕಲೇಶಪುರದಿಂದ ಸುಬ್ರಮಣ್ಯದವರೆಗೆ ರೈಲ್ವೆ ಮಾರ್ಗವನ್ನು ೫೭ ಟರ್ನಲ್‌ಗಳು, ೭೦೦ ಸೇತುವೆಗಳು ಹಾಗೂ ಎರಡು ಬದಿಯ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕಷ್ಟವಾಗುವುದರಿಂದ ಪ್ರತ್ಯೇಕ ರೈಲ್ವೆ ಮಾರ್ಗ ಡಿಪಿಆರ್ ಮಾಡಿ ಟೆಂಡರ್ ಕರೆದು ೨೦೨೬ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಎಂದರು.

ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ ೩೪ ಕೋಟಿ ರೂ. ವೆಚ್ಚದಲ್ಲಿ, ಹಾಸನ ರೈಲ್ವೆ ನಿಲ್ದಾಣದಲ್ಲಿ ೨೨ ಕೋಟಿ ರೂ., ಸಕಲೇಶಪುರದ ರೈಲ್ವೆ ನಿಲ್ದಾಣದಲ್ಲಿ ೨೬ ಕೋಟಿ ರೂ. ವೆಚ್ಚದಲ್ಲಿ ಆಧುನಿಕರಣ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಅರಸೀಕೆರೆಯಿಂದ ಮೈಸೂರಿಗೆ ಹೆಚ್ಚುವರಿಯಾಗಿ ಒಂದು ಪ್ಯಾಸೆಂಜರ್ ರೈಲು ಒದಗಿಸುವಂತೆ, ದುದ್ದದಿಂದ ತಿಪಟೂರಿಗೆ ಹೊಸ ರೈಲ್ವೆ ಲೈನ್ ಆದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದರು. ಕಡೂರು ,ಬೀರೂರು ನಿಲ್ದಾಣ ದುಸ್ಥಿತಿಯಲ್ಲಿದ್ದು, ಇವುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ಆಧುನೀಕರಣಗೊಳಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಹಾಸನ -ಸೋಲಾಪುರ ಎಕ್ಸ್ ಪ್ರೆಸ್ ರೈಲನ್ನು ಶ್ರವಣಬೆಳಗೊಳ, ಚನ್ನರಾಯಪಟ್ಟಣ ಹಾಗೂ ಹಿರಿಸಾವೆಯಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

ಮುಂಬೈಗೆ ಹೊಗುವ ರೈಲು ವಾರದಲ್ಲಿ ೩ ದಿನ ಸಂಚರಿಸಿದರೆ ಚನ್ನರಾಯಪಟ್ಟಣ ತಾಲೂಕಿನ ಜನರಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದರು.

ಮಳೆಗಾಲದಲ್ಲಿ ಗದ್ದೆ ಬಿಂಡೆನಹಳ್ಳಿ, ಬೆಕ್ಕ, ಬೂಕನಬೆಟ್ಟ, ಚನ್ನರಾಯಪಟ್ಟಣದ ಅಂಡರ್ ಪಾಸ್ ನಲ್ಲಿ ನೀರು ನಿಲ್ಲದಂತೆ ನಿರ್ವಹಣೆ ಮಾಡಬೇಕಿದೆ ಎಂದರು.

ಶಾಸಕ ಸಿಮೆಂಟ್ ಮಂಜು ಮಾತನಾಡಿ, ಆಲೂರು ರೈಲ್ವೆ ನಿಲ್ದಾಣಕ್ಕೆ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಆಧುನಿಕರಣ ಗೊಳಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

ಶಾಸಕ ಹೆಚ್.ಕೆ.ಸುರೇಶ್ ಮಾತನಾಡಿ, ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಸ್ವಾಧೀನಪಡಿಸಿಕೊಳ್ಳುವ ಸಂದರ್ಭದಲ್ಲಿ ರೈತರಿಗೆ ನೀಡುವ ಪರಿಹಾರವನ್ನು ದುಪ್ಪಟ್ಟು ನೀಡುವಂತೆ ಮನವಿ ಮಾಡಿದರು.

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ರೈಲ್ವೆ ಇಲಾಖೆ ಹಾಗೂ ಕೆ.ಪಿ.ಟಿ.ಸಿ.ಎಲ್ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular