HomeKarnatakaಮೆಟ್ರೋ ಉದ್ಘಾಟನೆಯಲ್ಲಿ ನನ್ನ ಭಾಷಣ ಕಟ್ ; ಸಚಿವ ಕೃಷ್ಣಭೈರೇಗೌಡ ಅಸಮಾಧಾನ!

ಮೆಟ್ರೋ ಉದ್ಘಾಟನೆಯಲ್ಲಿ ನನ್ನ ಭಾಷಣ ಕಟ್ ; ಸಚಿವ ಕೃಷ್ಣಭೈರೇಗೌಡ ಅಸಮಾಧಾನ!

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ನ್ಯಾಯಯುತ ಪಾಲು ಕೇಳಿದ್ದಕ್ಕೆ ಸಿಕ್ಕ ಬಹುಮಾನವೇ ನನ್ನ ಭಾಷಣ ಕಟ್ ಮಾಡಿರುವುದು ಎಂದು ಸಚಿವ ಕೃಷ್ಣಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಮೆಟ್ರೋ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವ ತಮಗೆ ಮಾತನಾಡಲು ಅವಕಾಶ ನೀಡದಿರುವುದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಸಮಾಧಾನ ಹಂಚಿಕೊಂಡಿರುವ ಕೃಷ್ಣಭೈರೇಗೌಡ, ಮೆಟ್ರೋ ಉದ್ಘಾಟನಾ ಕಾರ್ಯಕ್ರಮದ ಸಭಾ ನಿರ್ವಹಣೆಯ ಆರಂಭಿಕ ಕರಡು ಪಟ್ಟಿಯಲ್ಲಿ ತಮ್ಮ ಭಾಷಣಕ್ಕೂ ಅವಕಾಶ ನಿಗದಿಪಡಿಸಲಾಗಿತ್ತು. ಆದರೆ, ನಿನ್ನೆ ರಾತ್ರಿ ಬಂದ ಅಂತಿಮ ಪಟ್ಟಿಯಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವರ ಭಾಷಣವನ್ನು ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.

ಮೆಟ್ರೋ ಯೋಜನೆಗೆ ಬಹುತೇಕ ಬಂಡವಾಳ ವೆಚ್ಚವನ್ನು ಕರ್ನಾಟಕವೇ ಭರಿಸುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯಕ್ಕೆ ನ್ಯಾಯಯುತ ಪಾಲು ಕೇಳಿದ್ದಕ್ಕೆ ಈ ರೀತಿ ಶಿಕ್ಷೆ ನೀಡಲಾಗಿದೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮ್ಮ ಭಾಷಣಕ್ಕೆ ಅವಕಾಶ ನೀಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರೂ, ಇದರಿಂದ ಬೆಂಗಳೂರಿನ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಹಿನ್ನಡೆಯಾಗುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸಚಿವರು ನೀಡಿದ್ದಾರೆ.”ಪರವಾಗಿಲ್ಲ, ನೀವು ನನ್ನ ಮಾತನ್ನು ಕಟ್ ಮಾಡಬಹುದು. ಆದರೆ ಬೆಂಗಳೂರಿನ ಅಭಿವೃದ್ಧಿಗೆ ಕೆಲಸ ಮಾಡುವುದನ್ನು ನಿಲ್ಲಿಸಲು ಸಾಧ್ಯವಿಲ್ಲ. ಇನ್ನೂ ಹೆಚ್ಚಿನ ಪರಿಶ್ರಮದಿಂದ ಕೆಲಸ ಮಾಡುತ್ತೇವೆ” ಎಂದು ಕೃಷ್ಣಭೈರೇಗೌಡ ಹೇಳಿದ್ದಾರೆ.ಬೆಂಗಳೂರು ಅಭಿವೃದ್ಧಿಯ ಜವಾಬ್ದಾರಿ ಹೊತ್ತಿರುವ ಸಚಿವರಿಗೇ ಮೆಟ್ರೋ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಲು ಅವಕಾಶ ನೀಡದಿರುವುದು ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಸಚಿವರ ಟ್ವೀಟ್ ನಲ್ಲೇನಿದೆ

ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ – ನನ್ನ ಭಾಷಣ ಕಟ್! ಬೆಂಗಳೂರು ಅಭಿವೃದ್ಧಿ ಸಚಿವನಿಗೆ ಮೆಟ್ರೋ ಉದ್ಘಾಟನೆಯಲ್ಲಿ ಮಾತನಾಡಲು ಇಲ್ಲ ಅವಕಾಶ. ಸಭಾ ಕಾರ್ಯಕ್ರಮದ ಡ್ರಾಫ್ಟ್ ನಲ್ಲಿ ನನ್ನ ಮಾತಿಗೆ ಅವಕಾಶ ನಿಗದಿಯಾಗಿತ್ತು. ನಿನ್ನೆ ರಾತ್ರಿ ಬಂದ ಅಂತಿಮ ಪಟ್ಟಿಯಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವರ ಮಾತನ್ನು ಕಟ್ ಮಾಡಲಾಗಿದೆ. ಬಹುತೇಕ ಬಂಡವಾಳ ಖರ್ಚು ನಮ್ಮದು. ಕರ್ನಾಟಕಕ್ಕೆ ನ್ಯಾಯಯುತ ಪಾಲು ಕೇಳಿದರೆ ಈ ರೀತಿ ಶಿಕ್ಷೆ. ಪರವಾಗಿಲ್ಲ, ನೀವು ನನ್ನ ಮಾತನ್ನು ಕಟ್ ಮಾಡಬಹುದು. ಆದರೆ ಬೆಂಗಳೂರಿನ ಅಭಿವೃದ್ಧಿಗೆ ಕೆಲಸ ಮಾಡೋದನ್ನ ನಿಲ್ಲಿಸಲಿಕ್ಕೆ ಆಗೋದಿಲ್ಲ. ಇನ್ನೂ ಹೆಚ್ಚಿನ ಪರಿಶ್ರಮದಿಂದ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಿಂಕ್ ಲೈನ್‌ ಮಾರ್ಗವನ್ನು ಉದ್ಘಾಟಿಸಲಿದ್ದು, ನವೆಂಬರ್ 14ರಿಂದ ಸಾರ್ವಜನಿಕರ ಪ್ರಯಾಣಕ್ಕೆ ಮುಕ್ತವಾಗಲಿದೆ. ಆರಂಭದಲ್ಲಿ ಪ್ರತಿ 8 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸಂಚರಿಸಲಿದೆ.

ಸದ್ಯಕ್ಕೆ ಪಿಂಕ್ ಲೈನ್‌ನ ಕಾಳೇನ ಅಗ್ರಹಾರದಿಂದ ತಾವರೆಕೆರೆ (ಸಿದ್ದಗುಂಟೆ ಪಾಳ್ಯ) ವರೆಗಿನ 7.5 ಕಿಲೋ ಮೀಟರ್ ಎತ್ತರಿಸಿದ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗಲಿದೆ. ನವೆಂಬರ್ 13ರಂದು ಉದ್ಘಾಟನೆ ನಡೆಯಲಿದ್ದು, ಮರುದಿನ ಬೆಳಗ್ಗೆ 6 ಗಂಟೆಯಿಂದ ಸಾರ್ವಜನಿಕರು ಮೆಟ್ರೋದಲ್ಲಿ ಪ್ರಯಾಣಿಸಬಹುದು.

ಆರಂಭಿಕ ಹಂತದಲ್ಲಿ ಪಿಂಕ್ ಲೈನ್‌ನಲ್ಲಿ ಒಟ್ಟು ಐದು ರೈಲುಗಳನ್ನು ನಿಯೋಜಿಸಲಾಗುತ್ತದೆ. ಈ ಪೈಕಿ ನಾಲ್ಕು ರೈಲುಗಳು ನಿರಂತರವಾಗಿ ಸಂಚರಿಸಲಿದ್ದು, ಒಂದು ರೈಲನ್ನು ಹೆಚ್ಚುವರಿ ವ್ಯವಸ್ಥೆಯಾಗಿ ಇರಿಸಲಾಗುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತಿ 8 ನಿಮಿಷಕ್ಕೊಮ್ಮೆ ರೈಲು ಲಭ್ಯವಾಗಲಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular