HomeKarnatakaಸಚಿವ ಜಮೀರ್ ಅಹ್ಮದ್ SDPI ಗೆ ಫಂಡಿಂಗ್ ಮಾಡಿಲ್ಲ, ನಮಗೆ ಸಂಪೂರ್ಣ ಸಹಕಾರ: ಮಲ್ಲಿಕಾರ್ಜುನ ಸ್ಪಷ್ಟನೆ

ಸಚಿವ ಜಮೀರ್ ಅಹ್ಮದ್ SDPI ಗೆ ಫಂಡಿಂಗ್ ಮಾಡಿಲ್ಲ, ನಮಗೆ ಸಂಪೂರ್ಣ ಸಹಕಾರ: ಮಲ್ಲಿಕಾರ್ಜುನ ಸ್ಪಷ್ಟನೆ

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಗೆ ಸಚಿವ ಜಮೀರ್ ಅಹ್ಮದ್ ಫಂಡಿಂಗ್ ಮಾಡಿದ್ದಾರೆ ಎನಿಸುವುದಿಲ್ಲ, ಚುನಾವಣೆಯಲ್ಲಿ ಅವರು ನಮಗೆ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಜಮೀರ್ ಅಹ್ಮದ್ ದಾವಣಗೆರೆಗೆ ಬಂದು ನಮಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಎಸ್‌ಡಿಪಿಐ ಅಭ್ಯರ್ಥಿಗೆ ಫಂಡಿಂಗ್ ಮಾಡಿದ್ದಾರೆ ಎಂದು ಅನಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಚುನಾವಣೆಗೆ ನಿಲ್ಲುವುದೇ ಗೆಲ್ಲುವುದಕ್ಕೆ. ಯಾರಾದರೂ ಸೋಲುತ್ತೇವೆ ಎಂದು ಹೇಳುತ್ತಾರಾ? ಆದರೆ ಕ್ಷೇತ್ರದ ಜನರ ದೃಷ್ಟಿಯಲ್ಲಿ ನಮ್ಮ ಮನೆತನ ಮತ್ತು ಪಕ್ಷದ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಲ್ಪಸಂಖ್ಯಾತರಲ್ಲಿ ಅಸಮಾಧಾನವಿಲ್ಲ. ಎಲ್ಲರೂ ಒಟ್ಟಿಗೆ ಕುಳಿತು ತೀರ್ಮಾನಿಸಿಯೇ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೆವು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular