HomeKarnatakaಇಂದು ಸಂಪುಟ ವಿಸ್ತರಣೆಗಾಗಿ ಸಿಎಂ, ಡಿಸಿಎಂ ದೆಹಲಿಗೆ: ಇಲ್ಲಿದೆ ಸಂಭವನೀಯ ಸಚಿವರ ಪಟ್ಟಿ

ಇಂದು ಸಂಪುಟ ವಿಸ್ತರಣೆಗಾಗಿ ಸಿಎಂ, ಡಿಸಿಎಂ ದೆಹಲಿಗೆ: ಇಲ್ಲಿದೆ ಸಂಭವನೀಯ ಸಚಿವರ ಪಟ್ಟಿ

ಬೆಂಗಳೂರು: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಇಂದು ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಸಂಜೆ 6:30ಕ್ಕೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಪುಟ ವಿಸ್ತರಣೆಯ ಸಂಬಂಧ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ಕುರಿತಾಗಿ ಒಪ್ಪಿಗೆ ಪಡೆದುಕೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಧು ಬಂಗಾರಪ್ಪ, ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಎಂ. ಕೃಷ್ಣಪ್ಪ, ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಆರ್.ವಿ. ದೇಶಪಾಂಡೆ, ಶಿವರಾಜ್ ತಂಗಡಗಿ, ಕೆ.ಎನ್. ರಾಜಣ್ಣ, ಬಸವರಾಜ ರಾಯರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್, ಲಕ್ಷ್ಮಣ ಸವದಿ, ರಾಘವೇಂದ್ರ ಹಿಟ್ನಾಳ್, ಹೆಚ್‌.ಕೆ. ಪಾಟೀಲ್, ರಹೀಮ್ ಖಾನ್, ಜಿ.ಎಸ್. ಪಾಟೀಲ್, ಹೆಚ್.ಸಿ. ಮಹದೇವಪ್ಪ, ನರೇಂದ್ರಸ್ವಾಮಿ, ಚೆಲುವರಾಯಸ್ವಾಮಿ, ಈಶ್ವರ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ, ಸಂತೋಷ್ ಲಾಡ್, ವಿನಯ ಕುಲಕರ್ಣಿ, ಸಲೀಂ ಅಹಮದ್ ಮೊದಲಾದವರ ಹೆಸರುಗಳು ಸಂಭವನೀಯ ಸಚಿವರ ಪಟ್ಟಿಯಲ್ಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular