HomeKarnatakaಘಟಾನುಘಟಿಗಳಿಗೆ ಶಾಕ್: 12 ಸಚಿವರ ಸೋಲು; ಬಿಜೆಪಿಗೆ ಇರಿಸು ಮುರಿಸು ತಂದ ಫಲಿತಾಂಶ

ಘಟಾನುಘಟಿಗಳಿಗೆ ಶಾಕ್: 12 ಸಚಿವರ ಸೋಲು; ಬಿಜೆಪಿಗೆ ಇರಿಸು ಮುರಿಸು ತಂದ ಫಲಿತಾಂಶ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಸಚಿವರ ಪೈಕಿ 12 ಜನ ಸೋಲು ಕಂಡಿದ್ದಾರೆ. ಬಸವರಾಜ ಬೊಮ್ಮಾಯಿ ಸಂಪುಟದ 12 ಮಂದಿ ಸಚಿವರು ಸೋಲು ಕಂಡಿದ್ದಾರೆ. ಹಾಲಿ ಸಚಿವರಾಗಿದ್ದವರಲ್ಲಿ ಎಸ್. ಅಂಗಾರ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿತ್ತು. ಆನಂದ್ ಸಿಂಗ್ ಬದಲಿಗೆ ಅವರ ಪುತ್ರ ಸಿದ್ದಾರ್ಥ ಸಿಂಗ್ ಸ್ಪರ್ಧಿಸಿದ್ದರು. ಸಿದ್ದಾರ್ಥ ಸಿಂಗ್ ಸೋಲು ಕಂಡಿದ್ದಾರೆ.

ಸಚಿವರಾಗಿದ್ದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಕೆ. ಸುಧಾಕರ್, ವಿ. ಸೋಮಣ್ಣ, ಜೆ.ಸಿ. ಮಾಧುಸ್ವಾಮಿ, ಶ್ರೀರಾಮುಲು, ಎಂಟಿಬಿ ನಾಗರಾಜ್, ಶಂಕರ ಪಾಟೀಲ ಮುನೇನಕೊಪ್ಪ, ಬಿ.ಸಿ. ಪಾಟೀಲ್, ಕೆ.ಸಿ. ನಾರಾಯಣಗೌಡ, ಬಿ.ಸಿ. ನಾಗೇಶ್, ಹಾಲಪ್ಪ ಆಚಾರ್ ಸೋಲು ಕಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್. ಅಶೋಕ್ ಕನಕಪುರದಲ್ಲಿ ಸೋಲು ಕಂಡಿದ್ದು, ಪದ್ಮನಾಭನಗರದಲ್ಲಿ ಜಯಗಳಿಸಿದ್ದಾರೆ. ಸಿ.ಎನ್. ಅಶ್ವತ್ಥ್ ನಾರಾಯಣ, ಎಸ್.ಟಿ. ಸೋಮಶೇಖರ್, ಭೈರತಿ ಬಸವರಾಜ, ಕೆ. ಗೋಪಾಲಯ್ಯ, ಮುನಿರತ್ನ, ಆರಗ ಜ್ಞಾನೇಂದ್ರ, ವಿ. ಸುನಿಲ್ ಕುಮಾರ್, ಶಿವರಾಮ ಹೆಬ್ಬಾರ್, ಪ್ರಭು ಚೌಹಾಣ್, ಶಶಿಕಲಾ ಜೊಲ್ಲೆ ಅವರು ಜಯಗಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular