HomeKarnatakaವ್ಹೀಲಿಂಗ್ ಮಾಡಿ ಸಿಕ್ಕಿಬಿದ್ದ ಅಪ್ರಾಪ್ತ: ಬೈಕ್ ಕೊಟ್ಟವನಿಗೆ ಬಿಗ್ ಶಾಕ್

ವ್ಹೀಲಿಂಗ್ ಮಾಡಿ ಸಿಕ್ಕಿಬಿದ್ದ ಅಪ್ರಾಪ್ತ: ಬೈಕ್ ಕೊಟ್ಟವನಿಗೆ ಬಿಗ್ ಶಾಕ್

ಬೆಂಗಳೂರು: ವ್ಹೀಲಿಂಗ್ ಮಾಡಿ ಅಪ್ರಾಪ್ತ ಸಿಕ್ಕಿಬಿದ್ದಿದ್ದು, ಆತನಿಗೆ ವಾಹನ ಕೊಟ್ಟವನನ್ನು ದೋಷಿ ಎಂದು ಪರಿಗಣಿಸಿದ ಕೋರ್ಟ್ 25,000 ರೂ. ದಂಡ ವಿಧಿಸಿದೆ.

ಕಾಮಾಕ್ಷಿಪಾಳ್ಯದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ 2023ರ ಜನವರಿ 9 ರಂದು ಸಂಜೆ ದ್ವಿಚಕ್ರ ವಾಹನದಲ್ಲಿ ಇಬ್ಬರು ಅಪ್ರಾಪ್ತರು ವ್ಹೀಲಿಂಗ್ ಮಾಡಿದ್ದಾರೆ. ಪೊಲೀಸರು ವಾಹನ ವಶಕ್ಕೆ ಪಡೆದು ವರದಿ ನೀಡಿದ್ದು, ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಎರಡನೇ ಎಂಎಟಿಸಿ ಸಂಚಾರ ನ್ಯಾಯಾಲಯ ವಿಚಾರಣೆ ನಡೆಸಿ ಅಪ್ರಾಪ್ತನಿಗೆ ವಾಹನ ಕೊಟ್ಟಿದ್ದ ವಾಹನದ ಮಾಲೀಕ ಸೆಲ್ವಂ(59)ಗೆ 25,000 ರೂ. ದಂಡ ವಿಧಿಸಿ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular