HomeKarnatakaBREAKING NEWS: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಹಿಡಿದು ಧರ್ಮದೇಟು ನೀಡಿದ ಸ್ಥಳೀಯರು

BREAKING NEWS: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಹಿಡಿದು ಧರ್ಮದೇಟು ನೀಡಿದ ಸ್ಥಳೀಯರು

ಬೆಳಗಾವಿ: ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕನನ್ನು ಹಿಡಿದು ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ.

ಸುನೀಲ್ ದೀಪಾಳೆ ಎಂಬಾತ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಡ್ರಾಪ್ ಕೊಡುವ ನೆಪದಲ್ಲಿ ಬಾಲಕಿಯನ್ನು ಬೈಕ್ ನಲ್ಲಿ ಕರೆದೊಯ್ದ ಸುನೀಲ್ ದೀಪಾಳೆ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಬಾಲಕಿ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಓಡಿಬಂದಿದ್ದಾರೆ. ಆರೋಪಿ ಸುನೀಲ್ ದೀಪಾಳೆಯನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾರ್ವಜನಿಕರಿಂದ ಹಲ್ಲೆಗೊಳಗಾದ ಸುನೀಲ್ ನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular