ಮುಂಬೈ: 13 ವರ್ಷದ ಕ್ಯಾನ್ಸರ್ ರೋಗಿ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಕಮುಕ ಆಕೆಯನ್ನು ಗರ್ಭವತಿಯನ್ನಾಗಿಸಿರುವ ಘಟನೆ ಮಹರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಬಿಹಾರ ಮೂಲದ ಬಾಲಕಿ ಕ್ಯಾನ್ಸರ್ ಚಿಕಿತ್ಸೆಗೆಂದು ಮಹಾರಾಷ್ಟ್ರಕ್ಕೆ ಬಂದಿದ್ದಳು. ಬಿಹಾರದ ಬಾಲಕಿಯ ಹಳ್ಲಿಯಿಂದಲೇ ಬಂದಿದ್ದ ಆರೋಪಿ ಆಕೆಗೆ ಸಹಾಯ ಮಾಡುವ ನೆಪದಲ್ಲಿ ಬದ್ಲಾಪುರದಲ್ಲಿ ಬಾಲಕಿ ಹಾಗೂ ಕುಟುಂಬ ವಾಸಿಸಲು ಒಂದು ಮನೆಯನ್ನು ಬಾಡಿಗೆ ಪಡೆದಿದ್ದ.
ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆಕೆಯ ಮೇಲೆ ಮೂರು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಬಾಲಕಿ ಮುಂಬೈ ಆಸ್ಪತ್ರೆಗೆ ದಾಖಲಾಗಿ, ಕಿಮೋ ಥೆರಪಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಬಾಲಕಿ ಗರ್ಭಿಣಿ ಎಂಬುದು ಗೊತ್ತಾಗಿದೆ.
ಬಾಲಕಿ ಪೋಷಕರಿಗೆ ಮಾಅಹಿತಿ ನೀಡಲಾಗಿದ್ದು, ಸದ್ಯ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.