HomeLive Newsಅಪ್ರಾಪ್ತ ಕ್ಯಾನ್ಸರ್ ರೋಗಿಯನ್ನೂ ಬಿಡದ ಕಾಮುಕ: ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿಸಿದ ಆರೋಪಿ ಅರೆಸ್ಟ್

ಅಪ್ರಾಪ್ತ ಕ್ಯಾನ್ಸರ್ ರೋಗಿಯನ್ನೂ ಬಿಡದ ಕಾಮುಕ: ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿಸಿದ ಆರೋಪಿ ಅರೆಸ್ಟ್

ಮುಂಬೈ: 13 ವರ್ಷದ ಕ್ಯಾನ್ಸರ್ ರೋಗಿ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಕಮುಕ ಆಕೆಯನ್ನು ಗರ್ಭವತಿಯನ್ನಾಗಿಸಿರುವ ಘಟನೆ ಮಹರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಬಿಹಾರ ಮೂಲದ ಬಾಲಕಿ ಕ್ಯಾನ್ಸರ್ ಚಿಕಿತ್ಸೆಗೆಂದು ಮಹಾರಾಷ್ಟ್ರಕ್ಕೆ ಬಂದಿದ್ದಳು. ಬಿಹಾರದ ಬಾಲಕಿಯ ಹಳ್ಲಿಯಿಂದಲೇ ಬಂದಿದ್ದ ಆರೋಪಿ ಆಕೆಗೆ ಸಹಾಯ ಮಾಡುವ ನೆಪದಲ್ಲಿ ಬದ್ಲಾಪುರದಲ್ಲಿ ಬಾಲಕಿ ಹಾಗೂ ಕುಟುಂಬ ವಾಸಿಸಲು ಒಂದು ಮನೆಯನ್ನು ಬಾಡಿಗೆ ಪಡೆದಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆಕೆಯ ಮೇಲೆ ಮೂರು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಬಾಲಕಿ ಮುಂಬೈ ಆಸ್ಪತ್ರೆಗೆ ದಾಖಲಾಗಿ, ಕಿಮೋ ಥೆರಪಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಬಾಲಕಿ ಗರ್ಭಿಣಿ ಎಂಬುದು ಗೊತ್ತಾಗಿದೆ.

ಬಾಲಕಿ ಪೋಷಕರಿಗೆ ಮಾಅಹಿತಿ ನೀಡಲಾಗಿದ್ದು, ಸದ್ಯ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular