HomeCrimeBIG NEWS: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಆತ್ಮಹತ್ಯೆಗೆ ಶರಣಾದ ಸಂತ್ರಸ್ತೆ

BIG NEWS: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಆತ್ಮಹತ್ಯೆಗೆ ಶರಣಾದ ಸಂತ್ರಸ್ತೆ

ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ, ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಭೋಜಿಪುರ ಗ್ರಾಮದಲ್ಲಿ ನಡೆದಿದೆ.

13 ವರ್ಷದ ಬಾಲಕಿ ಮೇಲೆ ದುರುಳರು ಗ್ಯಾಂಗ್ ರೇಪ್ ನಡೆಸಿದ್ದರು. ಘಟನೆ ನಡೆದ ಒಂದು ದಿನದ ಬಳಿಕ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಬಾಲಕಿಯ ತಂದೆ ನೀಡಿದ ದೂರಿನ ಆಧಾರದಲ್ಲಿ ಎಫ್ ಐ ಆರ್ ದಾಖಲಾಗಿದೆ.

ಬಟ್ಟೆ ಒಣಗಿಸಲೆಂದು ಹೊಲಕ್ಕೆ ಹೋಗಿದ್ದ ತನ್ನ ಮಗಳನ್ನು ಅಂಕಿತ್ ಹಾಗೂ ಪಂಕಜ್ ಎಂಬ ದುರುಳರು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದರು. ಬಾಲಕಿಯ ಕಿರುಚಾಟ, ಚೀರಾಟ ಕೇಳಿದ ಆಕೆಯ ಸಹೋದರಿ ಸ್ಥಳಕ್ಕೆ ಧಾವಿಸುತ್ತಿದ್ದಂತೆ ಕಾಮುಕರು ಪರಾರಿಯಾಗಿದ್ದಾರೆ. ಘಟನೆ ಬಳಿಕ ಮಗಳು ಆತ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಎಂದು ಮೃತ ಬಾಲಕಿಯ ತಂದೆ ದೂರು ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರನ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಇನ್ನೋರ್ವ ತಲೆಮರೆಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮುಖೇಶ್ ಚಂದ್ರ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular