ಪಾಪಿಗಳಿಂದ ಅಪ್ರಾಪ್ತೆ ಮೇಲೆ ಎಂಟು ತಿಂಗಳು ಅತ್ಯಾಚಾರ: ಬ್ಲಾಕ್​ಮೇಲ್​

ಇಸ್ಲಾಮಾಬಾದ್: ಪಾಕಿಸ್ತಾನದ ಮುಜಾಫರ್‌ಗಢ ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದರಲ್ಲಿ 13 ವರ್ಷದ ಬಾಲಕಿ ಮೇಲೆ ಎಂಟು ತಿಂಗಳ ಕಾಲ ಮೂವರು ಕಾಮುಕರು ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಜತೋಯ್ ತೆಹಸಿಲ್‌ನ ಕೋಟ್ಲಾ ರಹಮ್ ಶಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ .

ಬಾಲಕಿಯ ಬೆತ್ತಲೆ ಫೊಟೋಗಳು ಮತ್ತು ವಿಡಿಯೋಗಳನ್ನು ತೋರಿಸುತ್ತಾ ಬ್ಲ್ಯಾಕ್‌ಮೇಲ್‌ ಮಾಡಲಾಗಿದೆ. ಬಾಲಕಿ ಗರ್ಭಿಣಿ ಎಂದು ತಿಳಿದ ಬಳಿಕ ವಿಷಯ ಬೆಳಕಿಗೆ ಬಂದಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಈ ಕಾಮುಕರ ಪೈಕಿ ಒಬ್ಬ ಎಂಟು ತಿಂಗಳ ಹಿಂದೆ ಹುಡುಗಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದಿದ್ದ. ನಂತರ ಮೂವರು ಸೇರಿ ರೇಪ್​ ಮಾಡಿ ವಿಡಿಯೋ ಚಿತ್ರೀಕರಿಸಿದ್ದಾರೆ. ಬಳಿಕ ಅವರು ಬ್ಲ್ಯಾಕ್‌ಮೇಲ್ ಮಾಡಲು ಪ್ರಾರಂಭಿಸಿದರು. ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವನ್ನು ಮುಂದುವರೆಸಿದರು ಎನ್ನಲಾಗಿದೆ.
ಬಾಲಕಿ ದೂರು ನೀಡಿದ್ದು ವಿಚಾರಣೆ ನಡೆಯುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read