HomeKarnatakaBIG NEWS: ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

BIG NEWS: ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಕಲಬುರ್ಗಿ: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕಲಬುರ್ಗಿ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ.

ಜೇವರ್ಗಿಯ ಶರಣ ಶಿಕ್ಷೆಗೆ ಒಳಗಾಗಿರುವ ಅಪರಾಧಿ. ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ವಿಶೇಷ ಪೋಕ್ಸೋ ನ್ಯಾಯಾಲಯ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ರಕರಣದಲ್ಲಿ ಸಂತ್ರಸ್ತ ಬಾಲಕಿಗೆ ಕಾನೂನು ಪ್ರಾಧಿಕಾರದ ವತಿಯಿಂದ 7 ಲಕ್ಷ ರೂಪಾಯಿ ಪರಿಹಾರವನ್ನು ಒಂದು ತಿಂಗಳೊಳಗಾಗಿ ನೀಡುವಂತೆ ಆದೇಶ ನೀಡಿದೆ.

2022ರ ಜನವರಿಯಲ್ಲಿ ಬಾಲಕಿಯ ಹುಟ್ಟುಹಬ್ಬದ ದಿನದಂದೆ ಆಕೆಯನ್ನು ಪ್ರೀತಿಸುತ್ತಿದ್ದೇನೆ, ಮದುವೆಯಾಗುತ್ತೇನೆ ಎಂದು ಬಲವಂತದಿಂದ ಆರೋಪಿ ಶರಣ ಅತ್ಯಾಚಾರವೆಸಗಿದ್ದ. ವಿಷಯ ತಿಳಿಸಿದರೆ ಮರ್ಯಾದೆ ಕಳೆಯುವುದಾಗಿ ಬೆದರಿಸಿದ್ದ. ಇದಾದ ಬಳಿಕ ಜ.25ರಂದು ಬಾಲಕಿ ಸಂಬಂಧಿಕರ ಮನೆಗೆ ಹೋಗಿದ್ದಾಗ ಆಕೆಯನ್ನು ಬಲವಂತದಿಂದ ಕಾರಿನಲ್ಲಿ ಬೆಂಗಳೂರಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ. ಬಾಲಕಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆಕೆಯನ್ನು ಎಲೆಕ್ಟ್ರಾನಿಕ್ ಸಿಟಿಯ ದೊಡ್ಡನಾಗಮಂಗಲ ಬಳಿ ಮನೆಯೊಂದರಲ್ಲಿ ಕೂಡಿ ಹಾಕಿದ್ದ. ಆರೋಪಿ ಶರಣ ವಿರುದ್ಧ ಪ್ರಕರಣ ಸಾಬೀತಾಗಿದ್ದು ಇದೀಗ ಪೋಕ್ಸೋ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular