‌Shocking: ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ ; ಗರ್ಭಿಣಿಯಾದ ಬಳಿಕ ಅಸಲಿ ಸತ್ಯ ಬಹಿರಂಗ !

ಮೈಸೂರಿನ ನಂಜನಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. 10ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಆಕೆಯ ಚಿಕ್ಕಪ್ಪ ನಂಜುಂಡಸ್ವಾಮಿ ಅತ್ಯಾಚಾರ ಎಸಗಿದ್ದಾನೆ. ಈ ದುರಂತದಿಂದ ಬಾಲಕಿ ಗರ್ಭಿಣಿಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಕಳೆದ ಜನವರಿಯಲ್ಲಿ ನಡೆದಿದ್ದು, ಆರೋಪಿ ನಂಜುಂಡಸ್ವಾಮಿ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆತಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆಯ ಬಗ್ಗೆ ಯಾರಿಗೂ ತಿಳಿಸದಂತೆ ಬೆದರಿಸಿ, ಬಾಲಕಿಯನ್ನು ಶಾಲೆಗೆ ಕಳುಹಿಸಿದ್ದಾನೆ. ಆದರೆ, ಕಳೆದ ಎರಡು ತಿಂಗಳಿಂದ ಬಾಲಕಿಗೆ ಮುಟ್ಟಾಗದ ಕಾರಣ, ಕುಟುಂಬದವರು ವೈದ್ಯರ ಬಳಿ ತಪಾಸಣೆಗೆ ಕರೆದೊಯ್ದಾಗ, ಆಕೆ ಆರು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ.

ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿ, ಆರೋಪಿ ನಂಜುಂಡಸ್ವಾಮಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಸ್ತುತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಬಾಲಕಿಯನ್ನು ಪೊಲೀಸ್ ಭದ್ರತೆಯೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಲಾಗುತ್ತಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಮುಂದಿನ ಕಾನೂನು ಕ್ರಮಕ್ಕೆ ಸಿದ್ಧತೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read