ಬೆಂಗಳೂರು : ಹುಟ್ಟುಹಬ್ಬದ ದಿನವೇ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹುಟ್ಟುಹಬ್ಬದ ದಿನ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ.
ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಯುವಕ ಯತೀಶ್ 15 ವರ್ಷದ ಬಾಲಕಿಯನ್ನ ಕೇಕ್ ಕತ್ತರಿಸುವುದಾಗಿ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ. ಕೇಕ್ ಕತ್ತರಿಸುವ ನೆಪದಲ್ಲಿ
ರಾಶಿ ಲೇಔಟ್ಗೆ ಕರೆದೊಯ್ದು ಅತ್ಯಾಚಾರ ಎಸಗಿ ಕಾಮುಕ ಎಸ್ಕೇಪ್ ಆಗಿದ್ದಾನೆ. 9 ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಈ ಸಂಬಂಧ ಪೊಲೀಸರಿಗೆ ಪೋಷಕರು ದೂರು ನೀಡಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
