HomeKarnatakaBREAKING NEWS: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್: ಅಪರಾಧಿಗೆ 20 ವರ್ಷ ಕಠಿಣ...

BREAKING NEWS: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್: ಅಪರಾಧಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿದ ಕೋರ್ಟ್

ರಾಯಚೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣಕ್ಕೆ ಸಂಬಂದಿಸಿದಂತೆ ಪೋಕ್ಸೋ ವಿಶೇಷ ನ್ಯಾಯಾಲಯ ಅಪರಾಧಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ರಾಯಚೂರಿನಲ್ಲಿ 2021ರಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಂಗಸಗೂರು 3ನೇ ಅಧಿಕ ಪೋಕ್ಸೋ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಅಪರಾಧಿ ಹುಲಿಯಪ್ಪಗೆ 20 ವರ್ಷ ಕಠಿಣ ಜೈಲುಶಿಕ್ಷೆ ಹಾಗೂ 15 ದ್ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಅಲ್ಲದೇ ನೊಂದ ಬಾಲಕಿಗೆ ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ 9 ಲಕ್ಷ ಪರಿಹಾರ ನೀಡುವಂತೆ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2021ರಲ್ಲಿ ರಾಯಚೂರು ಜಿಲ್ಲೆ ಲಿಂಗಸಗೂರಿನಲ್ಲಿ ನಡೆದಿದ್ದ ಪ್ರಕರಣ ಇದಾಗಿದ್ದು, ಲಿಂಗಸಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular