ಮದುವೆಗೆ ಮೊದಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿ ಅರೆಸ್ಟ್

ಶಿವಮೊಗ್ಗ: ಮದುವೆಯಾಗುವುದಾಗಿ ಅಪ್ರಾಪ್ತೆಯನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಆರೋಪಿಯನ್ನು ರಿಪ್ಪನ್ ಪೇಟೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ ಆರೋಪಿ 2023ರ ಸೆಪ್ಟೆಂಬರ್ 26ರಂದು ತನ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತೆಗೆ ಬರಲು ಹೇಳಿದ್ದಾನೆ. ಬಲವಂತದಿಂದ ಸಂತ್ರಸ್ತೆಯನ್ನು ರಾತ್ರಿಯೂ ಮನೆಯಲ್ಲಿ ಉಳಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದಾದ ಎರಡು ತಿಂಗಳ ನಂತರ ಮತ್ತೆ ಅಪ್ರಾಪ್ತೆ ಆತನ ಮನೆಯಲ್ಲಿ 15 ದಿನ ಉಳಿದುಕೊಂಡಿದ್ದು, ಆಗಲೂ ಅನೇಕ ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ಹೇಳಲಾಗಿದೆ.

ಕೆಲವು ದಿನಗಳ ಬಳಿಕ ಅಪ್ರಾಪ್ತೆಗೆ ಅನಾರೋಗ್ಯ ಉಂಟಾಗಿದ್ದು, ತಪಾಸಣೆ ನಡೆಸಿದಾಗ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಸಂತ್ರಸ್ತೆಗೆ 18 ವರ್ಷ ತುಂಬಿದ ನಂತರ ಮದುವೆಯಾಗುವುದಾಗಿ ಆಕೆಯ ಕುಟುಂಬದವರಿಗೆ ಆರೋಪಿ ತಿಳಿಸಿದ್ದಾನೆ. ಆಗಸ್ಟ್ 17ರಂದು ಸಂತ್ರಸ್ತೆಗೆ ಹೆಣ್ಣು ಮಗು ಜನಿಸಿದ್ದು, ಬಳಿಕ ಆರೋಪಿ ವಿರುದ್ದ ಅಪ್ರಾಪ್ತೆ ಮಹಿಳಾ ಸಾಂತ್ವನ ಕೇಂದ್ರದಲ್ಲಿ ದೂರು ದಾಖಲಿಸಿದ್ದಾರೆ.

ನಂತರ ರಿಪ್ಪನ್ ಪೇಟೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read