ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹದ ವೆಚ್ಚಕ್ಕಾಗಿ ಪ್ರತಿ ಜೋಡಿಗೆ ₹50,000 ನೆರವು ನೀಡಲಾಗುತ್ತಿದ್ದು, ಅರ್ಹ ಸಂಸ್ಥೆಗಳು ನಿಗದಿತ ಷರತ್ತುಗಳೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
2026-27 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಾಮೂಹಿಕ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೊಡಿಗೆ ರೂ.50.00 ಸಾವಿರ (ಐವತ್ತು ಸಾವಿರ ರೂಪಾಯಿಗಳು ಮಾತ್ರ) ನೀಡುವ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಸ್ವಯಂ ಸೇವಾ ಸಂಸ್ಥೆಗಳು (https://mmdrsattendance. dom.karnataka.karnataka.gov.in/Home/Register) ಲಿಂಕ್ನಲ್ಲಿ ನೀಡಿರುವ Download Sarala Vivaha User Manual ಬಳಸಿಕೊಂಡು ಷರತ್ತುಗಳೊಂದಿಗೆ ಆನ್ಲೈನ್ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ಸಂಖ್ಯೆ:0836-2971590, ಧಾರವಾಡ ಮಾಹಿತಿ ಕೇಂದ್ರ:9738287549, ಹುಬ್ಬಳ್ಳಿ ಮಾಹಿತಿ ಕೇಂದ್ರ: 8867718261, ಕಲಘಟಗಿ ಮಾಹಿತಿ ಕೇಂದ್ರ:8951674107, ಕುಂದಗೋಳ ಮಾಹಿತಿ ಕೇಂದ್ರ:8904661872, ನವಲಗುಂದ ಮಾಹಿತಿ ಕೇಂದ್ರ:8746894524 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಕುಡಿಯುವ ನೀರನ್ನು ಕೃಷಿಗೆ ಬಳಸಬೇಡಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
ಧಾರವಾಡ : ನೀರನ್ನು ಸಂರಕ್ಷಿಸಿದರೆ, ಜೀವಸಂಕುಲವನ್ನು ಸಂರಕ್ಷಿಸಿದಂತೆ. ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸದೆ, ಮನೆಗಳಲ್ಲಿ ಮಿತವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದರು.
ಅವರು ಇಂದು (ಅ.13) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸಂಗ್ರಹಣೆ ಹಾಗೂ ಬೆಳೆ ಪರಿಹಾರ ಕುರಿತು ಸಭೆ ಜರುಗಿಸಿ, ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಗುಣಮಟ್ಟವನ್ನು ಅಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ಪರಿಶೀಲಿಸಬೇಕು. ಜಾನುವಾರುಗಳಿಗೆ ನೀರಿನ ಕೊರತೆಯಾಗದಂತೆ ನೀರಿನ ತೊಟ್ಟಿಗಳನ್ನು ತುಂಬಿಸಬೇಕು. ಸಾರ್ವಜನಿಕರು ಕುಡಿಯುವ ನೀರನ್ನು ಮಿತವಾಗಿ ಬಳಸಬೇಕು ಹಾಗೂ ನಲ್ಲಿಗಳನ್ನು ಅನಗತ್ಯವಾಗಿ ತೆರೆದಿಡಬಾರದು ಎಂದು ಸೂಚಿಸಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳ ಜನರಿಗೆ ನೀರಿನ ಸಂರಕ್ಷಣೆ ಹಾಗೂ ಸುರಕ್ಷಿತ ಬಳಕೆಯ ಕುರಿತು ಜಾಗೃತಿ ಮೂಡಿಸಲು ಫೆÇೀನ್ ಕರೆಗಳ ಮೂಲಕ ಧ್ವನಿ ಸಂದೇಶಗಳನ್ನು ಕಳುಹಿಸಲಾಗುವುದು ಎಂದು ತಿಳಿಸಿದರು.
ವಿದ್ಯುತ್ ಕಿಡಿಯಿಂದಾಗಿ 10 ರೈತರ ಕಬ್ಬು ಬೆಳೆ ಸುಟ್ಟುಹೋಗಿರುವ ಕುರಿತು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಎರಡು-ಮೂರು ದಿನಗಳೊಳಗೆ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆಗಳಿಗೆ ಕೈಗೊಂಡ ಕ್ರಮಗಳ ವಿವರ: ಪ್ರಸ್ತುತ ಜಿಲ್ಲೆಯ 3 ತಾಲ್ಲೂಕಿನ ಗ್ರಾಮೀಣ ಪ್ರದೇಶದ 17 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, 19 ಖಾಸಗಿ ಕೊಳವೆಬಾವಿ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಟ್ಯಾಂಕರ ಮೂಲಕ ನೀರು ಸರಬರಾಜು ಮಾಡುತ್ತಿಲ್ಲಾ.
ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕುಗಳಲ್ಲಿ ಮಲಪ್ರಭಜಲಾಶಯದಿಂದ ಕಾಲುವೆಗಳ ಮುಖಾಂತರ 55 ಕುಡಿಯುವ ನೀರಿನ ಕೆರೆಗಳನ್ನು ಅಗಸ್ಟ್ ತಿಂಗಳಿನಲ್ಲಿ ಭರ್ತಿ ಮಾಡಿಕೊಂಡಿದ್ದು ನವೆಂಬರ್ ಅಂತ್ಯದವರೆಗೆ ನಿರ್ವಹಣೆ ಮಾಡಬಹುದಾಗಿರುತ್ತದೆ.
ಧಾರವಾಡ ಜಿಲ್ಲೆಯ 05 ಸ್ಥಳೀಯ ಸಂಸ್ಥೆಗಳಲ್ಲಿರುವ 100 ವಾರ್ಡ್ಗಳಿದ್ದು, 100 ವಾರ್ಡ್ಗಳಲ್ಲಿ ಪ್ರತಿ ದಿನ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.
ಹುಬ್ಬಳ್ಳಿ-ಧಾರವಾಡ ಮಹಾನಗರದ ವ್ಯಾಪ್ತಿಯಲ್ಲಿ 82 ವಾರ್ಡ್ಗಳಿದ್ದು, ಅದರಲ್ಲಿ 13 ವಾರ್ಡ್ಗಳಲ್ಲಿ 24*7 ನೀರು ಪೆÇರೈಕೆ ಮಾಡಲಾಗುತ್ತಿದ್ದು, ಉಳಿದ ವಾರ್ಡ್ಗಳಲ್ಲಿ 2 ರಿಂದ 6 ದಿನಗಳಿಗೊಮ್ಮ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.
ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ದೂರುಗಳು ಸ್ವೀಕೃತವಾದ ತಕ್ಷಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಧಾರವಾಡ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಯ 22,862 ಹೆಕ್ಟರ್ ಗುರಿ ಇದ್ದು, ಪ್ರಸ್ತುತ 17,370 ಹೆಕ್ಟರ್ ಬಿತ್ತನೆಯಾಗಿದ್ದು ಶೇ. 76 ರಷ್ಟು ಸಾಧನೆಯಾಗಿರುತ್ತದೆ. ಸರ್ಕಾರವು ಧಾರವಾಡ ಜಿಲ್ಲೆಯ (08) ತಾಲ್ಲೂಕುಗಳನ್ನು ತೀವ್ರತರ ಬರಪೀಡಿತ ತಾಲ್ಲೂಕು ಎಂದು ಘೋಷಣೆಯನ್ನು ಮಾಡಿದ್ದು, 8 ತಾಲ್ಲೂಕುಗಳಲ್ಲಿ ಕೃಷಿ ಬೆಳೆ ಅಂದಾಜು 2.71 ಲಕ್ಷ ಹೆಕ್ಟರ್, ತೋಟಗಾರಿಕೆ ಬೆಳೆ ಅಂದಾಜು 0.17 ಲಕ್ಷ ಹೆಕ್ಟರ್ ಒಟ್ಟು ಅಂದಾಜು 2.88 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಅಂದಾಜು 1.88 ಲಕ್ಷ ರೈತರು ಹಾಗೂ ರೂ. 271.17 ಕೋಟಿಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆಯ 1,40,340 ಅರ್ಜಿ ಸ್ವೀಕರಿಸಲಾಗಿದೆ ಹಾಗೂ 1,30,371 ಹೆಕ್ಟರ್ ಪ್ರದೇಶದಲ್ಲಿ ಇಟಿಡಿoಟಟmeಟಿಣ ಆಗಿರುತ್ತದೆ ಎಂದರು.
ಮೇವಿನ ಲಭ್ಯತೆ: ಧಾರವಾಡ ಜಿಲ್ಲೆಯಲ್ಲಿ 1,84,037 ದೊಡ್ಡ ಜಾನುವಾರ ಹಾಗೂ 1,83,524 ಸಣ್ಣ ಜಾನುವಾರುಗಳಿದ್ದು, ಸದರಿ ಜಾನುವಾರುಗಳಿಗೆ 2,78,917 ಟನ್ ಗಳಷ್ಟು ಮೇವಿನ ಲಭ್ಯತೆ ಇದ್ದು, ಮುಂದಿನ 33 ವಾರಗಳನ್ನು ಮೇವು ಸಾಕಾಗುತ್ತದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ 07 ಮೇವು ಬ್ಯಾಂಕುಗಳನ್ನು ತೆರೆಯಲು ಸ್ಥಳವನ್ನು ಗುರುತಿಸಲಾಗಿದೆ.
ಸಭೆಯಲ್ಲಿ ಉಪವಿಭಾಗಾಧಿಕಾರಿ ಪ್ರಭಾವತಿ ಪಕೀರಪುರ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನೀಯರ ಜಗದೀಶ ಪಾಟೀಲ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೆ.ಸಿ. ಭದ್ರಣ್ಣವರ, ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಎಲ್ಲ ತಾಲೂಕಿನ ತಹಶೀಲ್ದಾರರು ಸೇರಿದಂತೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ಹೆಸ್ಕಾಂ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

