ಬಳ್ಳಾರಿ : ಪ್ರಸ್ತಕ ಸಾಲಿನ ಅಲ್ಪಸಂಖ್ಯಾತರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆ ಏ.27 ರಂದು ನಡೆಯಲಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.
ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯ ಪತ್ರವನ್ನು ಇಲಾಖೆಯ ವೈಬ್ಸೈಟ್ https://dom.karnataka.gov.in/ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.
ಪರೀಕ್ಷೆ ಕೇಂದ್ರದ ಹೆಸರು ಮತ್ತು ವಿವರ:
ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಇ) ಕೊಳಗಲ್ಲು, ಬಳ್ಳಾರಿ-9844040035, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ಕಾಲೇಜು ಕೊಳಗಲ್ಲು-7349008289, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬಳ್ಳಾರಿ ಟೌನ್-9844040035, ಸರ್ಕಾರಿ ಪ್ರೌಢ ಶಾಲೆ, ಓಪಿಜೆ ಹತ್ತಿರ ತೋರಣಗಲ್ಲು-9480933730, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಂಪ್ಲಿ, ಬಳ್ಳಾರಿ-7353346069 ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕುರುಗೋಡು, ಬಳ್ಳಾರಿ-7353346069.
ಹೆಚ್ಚಿನ ಮಾಹಿತಿಗಾಗಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224, ಸಹಾಯವಾಣಿ ಕೇಂದ್ರ 24*7–8277799990 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.