HomeLatest Newsಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾದ್ಯಮ) ಶಾಲೆಗಳ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಇ) ಶಾಲೆಗಳ ದಾಖಲಾತಿಗಾಗಿ 2026-27ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಆನ್ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ವಿದ್ಯಾರ್ಥಿಗಳು ಮತ್ತು ಪಾಲಕರುಗಳು ಸೇವಾಸಿಂಧು ಪೋರ್ಟಲ್ ಲಿಂಕ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 10 ಕೊನೆಯ ದಿನವಾಗಿದೆ.

ಕೊಳಗಲ್ಲಿನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಇ)ಯ ಪ್ರಾಂಶುಪಾಲರ ಮೊ.9844040035, ಬಳ್ಳಾರಿ ನಗರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.9844040035, ಸಂಡೂರಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.9480933730, ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.7353346069, ಕುರುಗೋಡಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.7353346069, ಸಿರುಗುಪ್ಪದ ರಾರಾವಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.8861623814 ಗೆ ಸಂಪರ್ಕಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳಲ್ಲಿ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular