HomeLatest Newsಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 'UPSC' ಮುಖ್ಯ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ‘UPSC’ ಮುಖ್ಯ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದವರಿಗೆ ಯುಪಿಎಸ್ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.

ಆಸಕ್ತ ಆಭ್ಯರ್ಥಿಗಳು ನಿರ್ದೇಶನಾಲಯದ ಪೋರ್ಟಲ್ನ https://dom.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ನಗರದ ಹಜ್ ಭವನದಲ್ಲಿ 03 ತಿಂಗಳ ವಸತಿ ಸಹಿತ ಶಿಷ್ಯವೇತನದೊಂದಿಗೆ ತರಬೇತಿಯನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಜೂ.21 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲನಾ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular